ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕತ್ತು ಕತ್ತರಿಸಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೈಯುಕ್ತಿಕ ದ್ವೇಷಕ್ಕೆ ಕೊಲೆಯಾದ ಯುವಕನನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಕೊಲೆ ಮಾಡಿದ ನಂತರ ಮಾರನೇ ದಿನ ಆರೋಪಿಗಳೇ ತೆರಳಿ ಪೊಲೀಸರಿಗೆ ಶರಣಾಗಿದ್ದಾರೆ. ಮುಬಾರಕ್, ಸುಹೇಲ್, ಆಲಿ ಅಕ್ರಮ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಇನ್ನೊಂದು ಮಾಹಿತಿಯಂತೆ 10 ಸಾವಿರ ರೂ.ಗೆ ಈ ಕೊಲೆ ನಡೆದಿರಬಹುದು ಎಂಬ ಆರೋಪ ಕೂಡ ಕೇಳಿ ಬಂದಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.