Kornersite

Just In Sports

ಕೆ.ಎಲ್. ರಾಹುಲ್ ಗೆ ಮತ್ತೆ ನಾಯಕನ ಪಟ್ಟ!

ಭಾರತ ತಂಡವು ಈಗಾಗಲೇ 2023ರ ಏಕದಿನ ಏಷ್ಯಾಕಪ್‌ (Asia Cup 2023) ಗೆದ್ದಿದೆ. ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆ ಭಾರತ ತಂಡ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ಹೀಗಾಗಿ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಭಾರತ ತಂಡ ಪ್ರಕಟಿಸಿದೆ. ಹಿರಿಯ ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ಗೆ ಅವಕಾಶ ನೀಡಿದೆ. ಮೊದಲೆರಡು ಪಂದ್ಯಗಳಿಗೆ ಕೆ.ಎಲ್‌ ರಾಹುಲ್‌ಗೆ (KL Rahul) ನಾಯಕತ್ವ ನೀಡಲಾಗಿದ್ದು, ರವೀಂದ್ರ ಜಡೇಜಾ (Ravindra Jadeja) ಉಪನಾಯಕರಾಗಿ ಕಣಕ್ಕೆ ಇಳಿಯಲಿದ್ದಾರೆ.

ಮೊದಲ ಎರಡು ಪಂದ್ಯಗಳಿಗೆ ಯುವ ಬ್ಯಾಟರ್‌ ಋತುರಾಜ್‌ ಗಾಯಕ್ವಾಡ್‌ ಹಾಗೂ ಸೂರ್ಯಕುಮಾರ್‌ ಯಾದವ್‌ಗೂ ಅವಕಾಶ ನೀಡಲಾಗಿದೆ. ಎರಡು ಪಂದ್ಯಗಳಿಗೆ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಕೆ.ಎಲ್. ರಾಹುಲ್ ತಂಡ ಮುನ್ನಡೆಸಲಿದ್ದಾರೆ.

ಏಕದಿನ ವಿಶ್ವಕಪ್‌ ಟೂರ್ನಿಗೆ ತಯಾರಿ ನಡೆಸಲು ಈ ಸರಣಿ ಎರಡೂ ತಂಡಗಳಿಗೆ ತಾಲೀಮು ಇದ್ದಂತೆ ಇದೆ.
ಮೊದಲೆರಡು ಪಂದ್ಯಗಳಿಗೆ ಕೆ.ಎಲ್ ರಾಹುಲ್ (ನಾಯಕ ಹಾಗೂ ವಿಕೆಟ್‌ ಕೀಪರ್‌), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿಧ್‌ ಕೃಷ್ಣ ಆಯ್ಕೆಯಾಗಿದ್ದಾರೆ.
3ನೇ ಪಂದ್ಯಕ್ಕೆ ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್ ಯಾದವ್, ಆರ್. ಅಶ್ವಿನ್, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್