Kornersite

Crime Just In Karnataka State

ಕೇವಲ 9 ಇಂಚಿನ ಜಾಗಕ್ಕೆ ಬಿತ್ತು ಹೆಣ; ಬೆಚ್ಚಿ ಬಿದ್ದ ಜನರು!

ಕೇವಲ 10 ಇಂಚಿಗಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೋಲಾರ ನಗರದ ಇದ್ರೀಸ್ ಸಾಬ್ ಬಡಾವಣೆಯಲ್ಲಿ ನಡೆದಿದೆ.

ಘಟನೆಯಲ್ಲಿ ಮುಜುಮಿಲ್ ಪಾಷಾ ಕೊಲೆಯಾಗಿರುವ ದುರ್ದೈವಿ ಎನ್ನಲಾಗಿದೆ. ರೋಷನ್, ಜಮೀರ್, ನಬೀವುಲ್ಲ, ಫಿರ್ದೋಸ್ ಕೊಲೆ ಮಾಡಿದ ಆರೋಪಿಗಳು. ಕೊಲೆಯಾಗಿರುವ ಮುಜುಮಿಲ್ ಪಾಷಾ ಅವರ ತಂದೆ ಮನೆ ನಿರ್ಮಾಣ ಮಾಡುವ ಸಂದರ್ಭದಲ್ಲಿ 10 ಇಂಚು ಕಿಟಕಿ ಸರ್ಜಾ‌ ಹೆಚ್ಚಾಗಿ ನಿರ್ಮಿಸಿದ್ದರು. ಹೀಗಾಗಿ ಓಡಾಡಲು ತೊಂದರೆಯಾಗುತ್ತದೆ ಎಂದು ಪಕ್ಕದ ಮನೆಯವರು ತಕರಾರು ಮಾಡಿದ್ದಾರೆ.

ಹೀಗಾಗಿ ಈ ವಿಚಾರಕ್ಕೆ ಸಂದರ್ಭದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ನಡೆಯುತ್ತಿದ್ದಂತೆ ಆರೋಪಿಗಳು ಕುಟುಂಬ ಸಮೇತರಾಗಿ ಪರಾರಿಯಾಗಿದ್ದಾರೆ. ಈ ಕುರಿತು ಕೋಲಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ