ಕೊಡಗಿನ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರ ಕಾಡು ಪ್ರದೇಶದಲ್ಲಿ ಸೂಟ್ ಕೇಸ್ ವೊಂದರಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎನ್ನಲಾಗಿದೆ