ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಗುಡು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ. ಆದರೆ ಇಂದು ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಬಹುದು. ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.