Kornersite

International Just In National Politics

ಭಾರತದ ಪ್ರಯಾಣ ಸಲಹೆಯನ್ನು ತಿರಸ್ಕರಿಸಿದ ಕೆನಡಾ

ಖಲಿಸ್ತಾನಿ ವಿಚಾರವಾಗಿ ಭಾರತ ಹಾಗೂ ಕೆನಡಾ ನಡುವಿನ ಸಂಬಂಧ ಹದಗೆಟ್ಟಿದೆ.

ಅಲ್ಲಿನ ಭಾರತೀಯ ನಾಗರಿಕರಿಗೆ ಎಚ್ಚರದಿಂದಿರಲು ಕೇಂದ್ರ ಸರ್ಕಾರ ಸಲಹೆ ನೀಡಿದೆ. ಭಾರತೀಯ ಸಂಸ್ಥೆಗಳ ಮೇಲೆ ಕೆನಡಾದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಭಾರತೀಯ ವಿದ್ಯಾರ್ಥಿಗಳು, ನಾಗರಿಕರು ಎಚ್ಚರ ವಹಿಸಬೇಕು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

ಅಲ್ಲಿನ ಸರ್ಕಾರದ ಆಶ್ರಯದಲ್ಲಿ ಭಾರತ ವಿರೋಧಿ ಚಟುವಟಿಕೆಗಳು, ದ್ವೇಷಪೂರಿತ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಈ ಸಂದರ್ಭದಲ್ಲಿ ಕೆನಡಾಕ್ಕೆ ಪ್ರಯಾಣಿಸಲು ಯೋಜಿಸುತ್ತಿರುವವರು ತಮ್ಮ ಪ್ರಯಾಣವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಲಾಗುತ್ತಿದೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

ಭಾರತ ವಿರೋಧಿ ಅಜೆಂಡಾ ಪರವಾಗಿರುವ ಭಾರತೀಯ ಸಮುದಾಯದ ಜನರು ಹಾಗೂ ರಾಜತಾಂತ್ರಿಕರನ್ನು ಗುರಿಯಾಗಿಸಿಕೊಂಡು ಬೆದರಿಕೆಗಳು ಬರುತ್ತಿವೆ. ಆದ್ದರಿಂದ ಹಿಂಸಾತ್ಮಕ ಘಟನೆಗಳು ನಡೆಯುವ ಪ್ರದೇಶಗಳಿಗೆ ಹೋಗದಂತೆ ವಿನಂತಿಸಲಾಗಿದೆ.
ಭಾರತ ಹಾಗೂ ಕೆನಡಾದ ಮಧ್ಯೆ ಕಂದಕ ಸೃಷ್ಟಿಗೆ ಖಲಿಸ್ತಾನ್ ಹೋರಾಟವೇ ಕಾರಣವಾಗಿದೆ. ಖಲಿಸ್ತಾನಿ ಉಗ್ರ ಹರ್ ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾದ ಪ್ರಧಾನಿ ಆರೋಪಿಸಿದ್ದಾರೆ. ಹೀಗಾಗಿ ಸಂಬಂಧ ಹದಗೆಟ್ಟಿದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು