Kornersite

Just In National

ಸನಾತನ ಧರ್ಮದ ವಿವಾದ; ಉದಯನಿಧಿ ಸ್ಟಾಲಿನ್ ಗೆ ಕೋರ್ಟ್ ನಿಂದ ನೊಟೀಸ್!

ನವದೆಹಲಿ : ಸನಾತನ ಧರ್ಮದ ಕುರಿತು ನೀಡಿ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡು ನೊಟೀಸ್ ನೀಡಿದೆ.

ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ (Udhayanidhi Stalin), ಸಿಬಿಐ, ಎ ರಾಜಾ ಸೇರಿದಂತೆ ಇನ್ನಿತರ ಪಕ್ಷಗಳಿಗೆ ಕೂಡ ನೊಟೀಸ್ ನೀಡಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ನೊಟೀಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯಲ್ಲಿ ಒಟ್ಟು 14 ಕಕ್ಷಿದಾರರನ್ನು ಸೇರಿಸಲಾಗಿದೆ. ತಮಿಳುನಾಡು ಸರ್ಕಾರದ ವಿವಿಧ ಇಲಾಖೆಗಳು, ಡಿಜಿಪಿ, ಪೊಲೀಸ್ ಕಮಿಷನರ್, ಸಿಬಿಐ ಮತ್ತು ಇತರರು ಸೇರಿದ್ದಾರೆ.

ತಮಿಳುನಾಡು (Tamilnadu) ಸಿಎಂ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಸೆಪ್ಟೆಂಬರ್ 2 ರಂದು ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದರು. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದರು.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ