Kornersite

Just In Karnataka State

ಸಂಕಷ್ಟದಲ್ಲಿ ರೈತರು; ಸರಳ ದಸರಾಕ್ಕೆ ಸರ್ಕಾರ ನಿರ್ಧಾರ!

ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರೈತ ವಲಯ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವಿಟರ್‌ ಮೂಲಕ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದಾಗಿ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ದಸರಾ ಆಚರಣೆಗೆ ಮಾಡಬೇಕಾ ಅಥವಾ ಬೇಡವಾ ಎಂಬ ಸಂದಿಗ್ಧ ಪರಿಸ್ಥಿತಿ ಉಂಟಾಗಿತ್ತು. ಆಚರಣೆಗೆ ಮುಂದಾಗಿದ್ದ ಸರ್ಕಾರ, ಈಗ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ