ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರೈತ ವಲಯ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಸಕ್ತ ವರ್ಷ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವಿಟರ್ ಮೂಲಕ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದಾಗಿ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು, ಈ ಬಾರಿ ಸರಳ ಹಾಗೂ ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಬರಸಿಡಿಲು ಬಡಿದಿದೆ. ದಸರಾ ಆಚರಣೆ ಸಿದ್ಧತೆಯಲ್ಲಿದ್ದ ಸರ್ಕಾರ ದಸರಾ ಆಚರಣೆಗೆ ಮಾಡಬೇಕಾ ಅಥವಾ ಬೇಡವಾ ಎಂಬ ಸಂದಿಗ್ಧ ಪರಿಸ್ಥಿತಿ ಉಂಟಾಗಿತ್ತು. ಆಚರಣೆಗೆ ಮುಂದಾಗಿದ್ದ ಸರ್ಕಾರ, ಈಗ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

