Kornersite

Just In Sports

ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ಮಧ್ಯೆ ಮೊದಲ ಪಂದ್ಯ!

ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ.

ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಆರಂಭವಾಗಲಿದ್ದು, ಅದಕ್ಕೂ ಮುನ್ನ ಈ ಸರಣಿ ಎರಡೂ ತಂಡಗಳಿಗೆ ಪ್ರಮುಖವಾಗಿದೆ. ಭಾರತ ತಂಡದಲ್ಲಿ ಮೊದಲ ಎರಡು ಏಕದಿನ ಪಂದ್ಯದಿಂದ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ರಾಹುಲ್ ತಂಡ ಮುನ್ನಡೆಸಲಿದ್ದಾರೆ.

ಶುಭ್ಮನ್ ಗಿಲ್, ಇಶಾನ್ ಕಿಶನ್ ಜೊತೆ ರುತುರಾಜ್ ಗಾಯಕ್ವಾಡ್ ಇರುವುದರಿಂದ ಯಾರಿಗೆ ಓಪನಿಂಗ್ ಮಾಡುವ ಅವಕಾಶ ಸಿಗಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ. ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ ಮರಳಿದ್ದಾರೆ. ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಅಶ್ವಿನ್ ಅವರನ್ನು ಆಸ್ಟ್ರೇಲಿಯಾ ಸರಣಿಗೆ ಆಯ್ಕೆ ಮಾಡಲಾಗಿದೆ.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್