ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮೈತ್ರಿಗೆ ಮುನ್ನುಡಿ ಬರೆದಿದ್ದಾರೆ. ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ಅವರು ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ದೋಸ್ತಿಗೆ ಜೈ ಎನ್ನಲು ಮುಂದಾಗಿದ್ದಾರೆ.
ಈ ಕುರಿತು ದೆಹಲಿಯ ಸಫ್ದರ್ಜಂಗ್ ಲೇನ್ ನಲ್ಲಿರುವ ದೇವೇಗೌಡರ ನಿವಾಸಲ್ಲಿ ಮಹತ್ವದ ಸಭೆ ನಡೆಯಿತು. ಬಿಜೆಪಿ ವತಿಯಿಂದ ಆಗಮಿಸಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್ ದಳಪತಿಗಳ ಜೊತೆ ಮೈತ್ರಿ ಕುರಿತು ಮಾತನಾಡಿದರು. 6 ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ನಾಲ್ಕು ಲೋಕಸಭಾ ಕ್ಷೇತ್ರಗಳನ್ನ ಬಿಟ್ಟುಕೊಡಲೇ ಬೇಕು ಎಂದು ಪಟ್ಟು ಹಿಡಿದಿದೆ. ಮಂಡ್ಯ, ಹಾಸನ, ಕೋಲಾರ, ತುಮಕೂರು ಸೀಟ್ಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದ್ದು, ಈ ಪೈಕಿ ತುಮಕೂರು ಲೋಕಸಭಾ ಕ್ಷೇತ್ರದ ಕುರಿತು ಅಂತಿಮವಾಗಿಲ್ಲ ಎಂದು ತಿಳಿದು ಬಂದಿದೆ.
ಅಮಿತ್ ಶಾ ಜೊತೆ ಚರ್ಚೆ ನಂತರ ಮೈತ್ರಿಗೆ ಫೈನಲ್ ಮುದ್ರೆ ಬೀಳಲಿದೆ.