ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಭುಗಿಲೆದಿದ್ದೆ.ಅಲ್ಲದೇ, ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್‌ಗೂ ಕರೆ ನಿಡಲಾಗಿದೆ.
ಕನ್ನಡಪರ ಸಂಘಟನೆಗಳು ಇಂದು ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಕೇಂದ್ರಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿಗರ ಮೇಲೂ ಆಕ್ರೋಶ ಹೊರಹಾಕಿದ ಹೋರಾಟಗಾರರು ಬೆಂಗಳೂರಿನ ಜನರು ಕಾವೇರಿ ನೀರಿನ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕಾವೇರಿ ನೀರಿನ ಅವಶ್ಯಕತೆ ಎಲ್ಲರಿಗೂ ಇದೆ ಎಲ್ಲರು ಹೋರಾಟಕ್ಕೆ ಬಂದು ರೈತರಿಗೆ ಬೆಂಬಲ ನೀಡಬೇಕು. ತಮಿಳುನಾಡಿಗೆ ಹೊಗುತ್ತಿರುವ ನೀರನ್ನ ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಮಳವಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಮತ್ತೆ ಬಿಡುಗಡೆ ಮಾಡಿದರು.