Kornersite

Crime Just In National

ವಿದ್ಯಾರ್ಥಿಗಳಿದ್ದ ಶಾಲಾ ವಾಹನ ನಿಲ್ಲಿಸಿ ಗನ್ ತೋರಿಸಿದ ದುಷ್ಕರ್ಮಿಗಳು!

ಪುಟ್ಟ ವಿದ್ಯಾರ್ಥಿಗಳಿದ್ದ ಶಾಲಾ ವಾಹನವನ್ನು ಕಿಡಿಗೇಡಿಗಳ ಗುಂಪೊಂದು ಏಕಾಏಕಿ ನಿಲ್ಲಿಸಿ, ಗನ್ ಝಳಪಿಸಿ ರೀಲ್ಸ್ ಮಾಡಿರುವ ಆಘಾತಕಾರಿ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಹಾರದ ಮುಜಾಫರ್ ಪುರ್ ಜಿಲ್ಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಶಾಲಾ ವಾಹನವನ್ನು ಬೈಕ್ ಸವಾರರ ಗುಂಪು ತಡೆದಿದೆ. ನಂತರ ಆ ವಾಹನದ ಮುಂದೆ ಗನ್ ಝಳಪಿಸಿ ವೀಡಿಯೋ ಮಾಡಿಕೊಳ್ಳಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಘಟನೆಯ ವೀಡಿಯೋಗಳನ್ನು ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಮುಜಾಫರ್ ಪುರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್ಪಿ ಅಭಿಷೇಕ್ ಆನಂದ್ ತಿಳಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ಬೈಕ್ ಸವಾರರು ನಿರ್ಜನ ಸ್ಥಳದಲ್ಲಿ ಪಾರ್ಟಿ ಮಾಡುತ್ತಿದ್ದು, ಅಲ್ಲಿಯೂ ಆಯುಧಗಳನ್ನು ಝಳಪಿಸುತ್ತಿರುವುದು ಕಂಡು ಬಂದಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ