ನಟಿ ತ್ರಿಷಾ (Trisha Krishnan) ಮದುವೆ ಆಗುತ್ತಿದ್ದಾರೆ ಎಂಬ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿವೆ. ಇತ್ತೀಚೆಗೆ ನಟಿ ತ್ರಿಷಾ ಅವರ ಹೆಸರು ಹಲವಾರು ನಟರೊಂದಿಗೆ ತಳುಕು ಹಾಕಿಕೊಂಡಿತ್ತು.
ಎರಡು ದಿನಗಳ ಹಿಂದೆಯಷ್ಟೇ ಮಲಯಾಳಂ ನಿರ್ಮಾಪಕನ ಜೊತೆ ತ್ರಿಷಾ ಮದುವೆ ಆಗುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಸದ್ಯದದಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂಬ ಮಾತು ಕೂಡ ಕೇಳಿ ಬಂದಿತ್ತು. ಈ ನಡುವೆ ತ್ರಿಷಾ ಆ ಮದುವೆ ಬಗ್ಗೆ ಪ್ರತಿಕ್ರಿಯೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತ್ರಿಷಾ ಬರೆದುಕೊಂಡಿದ್ದು, ಈ ವಿಚಾರವನ್ನು ಇಲ್ಲಿಗೆ ಬಿಟ್ಟು ಬಿಡಿ. ರೂಮರ್ ಗಳನ್ನು ಹಂಚಬೇಡಿ ಎಂದು ಬರೆದುಕೊಳ್ಳುವ ಮೂಲಕ ಮದುವೆ ವಿಚಾರ ತಳ್ಳಿ ಹಾಕಿದ್ದಾರೆ. ಇದೊಂದು ಕೇವಲ ಶುದ್ಧ ಗಾಸಿಪ್ ಎಂದು ಅವರು ಹೇಳಿಕೊಂಡಿದ್ದಾರೆ.
ಹಿಂದೆ ತ್ರಿಷಾ ಅವರು ಉದ್ಯಮಿ ವರುಣ್ (Varun) ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಕೆಲವು ಕಾರಣಗಳಿಂದಾಗಿ ಅವರ ಸಂಬಂಧ ಮುರಿದು ಬಿದ್ದಿತ್ತು. 2015ರಲ್ಲಿ ನಡೆದ ಈ ಕಹಿ ಘಟನೆಯಿಂದ ಹೊರಬಂದು ಈಗ ಸಿನಿಮಾಗಳಲ್ಲಿ ಪವರ್ ಚಿತ್ರದ ನಟಿ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ.
‘ಪೊನ್ನಿಯನ್ ಸೆಲ್ವನ್’ (Ponniyin Selvan) ಚಿತ್ರದ ಸಕ್ಸಸ್ ನಂತರ ಮತ್ತೆ ಸಾಲು ಸಾಲು ಬಿಗ್ ಪ್ರಾಜೆಕ್ಟ್‌ಗಳಿಗೆ ತ್ರಿಷಾ ನಾಯಕಿಯಾಗಿದ್ದಾರೆ. ವೈಯಕ್ತಿಕ ಜೀವನದಲ್ಲಿಯೂ ಅವರು ಖುಷಿಯಾಗಿದ್ದಾರೆ. ಆದರೆ, ಅವರು ಬೇಗ ಮದುವೆಯಾಗಲಿ ಎಂಬುವುದು ಅವರ ಅಭಿಮಾನಿಗಳ ಮಾತಾಗಿದೆ.