Kornersite

Entertainment Just In Sandalwood

ಕನ್ನಡದಲ್ಲಿ ಬಿಗ್ ಬಾಸ್ ನ ಆರ್ಭಟ ಯಾವಾಗ ಆರಂಭ ಗೊತ್ತಾ?

ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ. ಕನ್ನಡದ ಕಿರುತೆರೆ ವೀಕ್ಷಕರು ಕಳೆದ 9 ಸೀಸನ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ 10ರ ಸೀಸನ್ ಆರಂಭವಾಗುತ್ತಿದೆ.

ಇತ್ತೀಚೆಗೆ ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆರಂಭವಾಗಲಿದೆ ಎನ್ನಲಾಗುತ್ತತ್ತು. ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 10 ಪ್ರೋಮೊ ಪ್ರಸಾರವಾಗುತ್ತಿದ್ದು, ಇದಕ್ಕೆ ಪುಷ್ಠಿ ನೀಡಿದಂತಾಗುತ್ತಿದೆ. ಈ ಬಾರಿಯ ಬಿಗ್ ಬಾಸ್ ಸೀಸನ್ 10 ಕಳೆದ 9 ಸೀಸನ್‌ಗಳಿಗಿಂತ ಭಿನ್ನವಾಗಿರುತ್ತದೆ ಎನ್ನಲಾಗಿದೆ. ಕಲರ್ಸ್ ಕನ್ನಡದಲ್ಲಿ ಈ ರಿಯಾಲಿಟಿ ಶೋ ಆರಂಭ ಆಗುತ್ತಿದ್ದು, ಪ್ರಸಾರದ ದಿನದ ಸಮೇತ ಪ್ರೋಮೊ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಸೀಸನ್ 10’ಕ್ಕೆ ಸಂಬಂಧಿಸಿದ ಎರಡು ಪ್ರೋಮೊಗಳನ್ನು ಬಿಡುಗಡೆ ಮಾಡಿತ್ತು. ಒಂದು ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ಚಿಕ್ಕದೊಂದು ಝಲಕ್ ಕೊಟ್ಟಿದ್ದರು.

ಸೆಪ್ಟೆಂಬರ್ 14ರಂದು ಕಿಚ್ಚ ಸುದೀಪ್ ಪ್ರೋಮೊ ರಿಲೀಸ್ ಮಾಡಲಾಗಿತ್ತು. ಆದರೆ, ಎಂದಿನಿಂದ ಪ್ರಸಾರ ಎಂಬುವುದು ಮಾತ್ರ ಪ್ರೋಮೊದಲ್ಲಿ ಇರಲಿಲ್ಲ. ಈಗ ಅಧಿಕೃತವಾಗಿ ಅಕ್ಟೋಬರ್ 8ರಂದು ಬಿಗ್ ಬಾಸ್ ಕನ್ನಡ ಪ್ರಸಾರವನ್ನು ಆರಂಭ ಮಾಡುವುದಾಗಿ ಹೇಳಲಾಗಿದೆ.
ಅಕ್ಟೋಬರ್ 8ರಂದು ಬಿಗ್ ಬಾಸ್ ಸೀಸನ್ 10 ಚಾಲನೆ ಸಿಗಲಿದೆ. ಎರಡು ದಿನಗಳ ಕಾಲ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳನ್ನು ಕಳುಹಿಸಿ ಕೊಡಲಾಗುತ್ತದೆ. ಸುಮಾರು 17 ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡುತ್ತಾರೆ ಎನ್ನಲಾಗಿದೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ