ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಗೆಲುವಿನೊಂದಿಗೆ ಏಕದಿನ ಮಾದರಿಯಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿರುವ ಭಾರತ ತಂಡ ಮೂರೂ ಮಾದರಿಗಳಲ್ಲಿ ನಂ. 1 ಆಗಿದೆ.
ಏಕದಿನ, ಟೆಸ್ಟ್ ಹಾಗೂ ಟಿ20 ಮಾದರಿಯಲ್ಲಿ ನಂ.1 ಸ್ಥಾನಕ್ಕೇರಿದೆ. ಈ ಪಂದ್ಯಕ್ಕೂ ಮೊದಲು ಭಾರತ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಬಹಳ ದಿನಗಳಿಂದ ನಂ.1 ಸ್ಥಾನದಲ್ಲಿತ್ತು. ಆದರೆ ಏಕದಿನ ಸರಣಿಯಲ್ಲಿ ಮಾತ್ರ ಆಸ್ಟ್ರೇಲಿಯಾ (Australia) ಮತ್ತು ಪಾಕಿಸ್ತಾನದ (Pakistan) ನಡುವೆ ನಂ.1 ಪಟ್ಟಕ್ಕಾಗಿ ಸ್ಪರ್ಧೆ ನಡೆದಿತ್ತು. ಆದರೆ, ಕಾಂಗರೂ ವಿರುದ್ಧ ಗೆದ್ದ ಭಾರತ, ಏಕದಿನದಲ್ಲಿ ನಂ. 1 ಸ್ಥಾನಕ್ಕೆ ಏರಿಕೆಯಾಗಿದೆ. ಹೀಗಾಗಿ ಪಾಕ್ ಗೆಳಗೆ ಇಳಿದಿದೆ.
ಭಾರತವು ಟಿ20 ಮಾದರಿಯಲ್ಲಿ 264 ರೇಟಿಂಗ್‌ನೊಂದಿಗೆ 1 ನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 261 ರೇಟಿಂಗ್‌ನೊಂದಿಗೆ 2 ನೇ ಸ್ಥಾನದಲ್ಲಿದೆ. ಟೆಸ್ಟ್‌ನಲ್ಲಿ ಭಾರತ 118 ರೇಟಿಂಗ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಕೂಡ ಅದೇ ಅಂಕಗಳನ್ನು ಹೊಂದಿದೆ.
ಮೊದಲು ಏಷ್ಯಾಕಪ್ ಗೆದ್ದ ಟೀಂ ಇಂಡಿಯಾ ನಂತರ ಮೊಹಾಲಿ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದೆ. ಹೀಗಾಗಿ 116 ರೇಟಿಂಗ್ ಪಾಯಿಂಟ್‌ಗಳನ್ನು ನಂ. 1 ಸ್ಥಾನಕ್ಕೆ ಏರಿಕೆ ಕಂಡಿದೆ.