ನಾಳೆ ಪಿಜಿ-ಸಿಇಟಿ 2023ರ ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಪರೀಕ್ಷೆಯು ನಾಳೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರ ವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರ ವರೆಗೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಬಿಗಿ ಕಾವಲು ಏರ್ಪಡಿಸಲಾಗಿದೆ.
ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೇಲ್ವಿಚಾರಣೆಯ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.