Kornersite

Just In Karnataka State

ಕೋಳಿ ಸಾಕಾಣಿಕೆಯನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸುವಂತಿಲ್ಲ!

ಬೆಂಗಳೂರು: ಕೋಳಿ ಸಾಕಣೆ ಮಾಡುವುದು ಕೂಡ ಕೃಷಿ ಚಟುವಟಿಕೆಯಾಗಿದ್ದು, ಈ ಉದ್ಯೋಗವನ್ನು ವಾಣಿಜ್ಯ ಚಟುವಟಿಕೆಯಾಗಿ ಪರಿಗಣಿಸಬಾರದು. ಹೀಗಾಗಿ ಯಾವುದೇ ರೀತಿಯ ತೆರಿಗೆ ವಿಧಿಸಲು ಗ್ರಾ ಪಂಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಕೋಳಿ ಸಾಗಣೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಪಂ ನಿಲುವು ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೇಕೊಪ್ಪದ ಕೆ. ನರಸಿಂಹಮೂರ್ತಿ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಕೋಳಿ ಸಾಗಣೆ ಮಾಡುವುದು ಕೃಷಿ ಚಟುವಟಿಕೆಗಾಗಿ. ಹೀಗಾಗಿ ಇದಕ್ಕೆ ಕಟ್ಟಡ ನಿರ್ಮಾಣ ಸಲುವಾಗಿ ಕೃಷಿ ಭೂಮಿಯನ್ನು ವಾಣಿಜ್ಯ ಭೂಮಿಯನ್ನಾಗಿ ಪರಿವರ್ತನೆ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಅರ್ಜಿದಾರರಿಂದ ತೆರಿಗೆ ರೂಪದಲ್ಲಿ ಈಗಾಗಲೇ ಸಂಗ್ರಹಿಸಿರುವ 59,551 ರೂ.ಗಳನ್ನು ಹಿಂದಿರುಗಿಸಬೇಕು ಎಂದೂ ನಿರ್ದೇಶನ ನೀಡಿ ಗ್ರಾಪಂ ಜಾರಿ ಮಾಡಿದ್ದ ನೋಟಿಸ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಅರ್ಜಿದಾರರರು ನಾಗಸಂದ್ರ ಗ್ರಾಮದಲ್ಲಿ ನಾಲ್ಕು ಎಕರೆ ಜಮೀನು ಹೊಂದಿದ್ದರು. ಅಲ್ಲದೇ, ಕೃಷಿ ಸಾಗಣೆ ಮಾಡಲು ಕಟ್ಟಡ ನಿರ್ಮಾಣ ಮಾಡುವುದಕ್ಕಾಗಿ ವಿದ್ಯುತ್‌ ಸಂಪರ್ಕ ಪಡೆಯುವುದಕ್ಕಾಗಿ ನಿರಾಕ್ಷೇಪಣಾ ಪತ್ರಕ್ಕಾಗಿ ಗ್ರಾಪಂಗೆ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ್ದ ಪಂಚಾಯತ್‌ ಅಧಿಕಾರಿಗಳು, ಕೋಳಿ ಸಾಗಣೆ ಕೇಂದ್ರವು ಕೈಗಾರಿಕೆಗಳ ಅಡಿಯಲ್ಲಿ ಬರಲಿದ್ದು, ನಿರಾಕ್ಷೇಪಣಾ ಪತ್ರ ವಿತರಣೆ ಮಾಡುವುದಕ್ಕಾಗಿ 1.3 ಲಕ್ಷ ರೂ. ಪಾವತಿ ಮಾಡಲೇಬೇಕೆಂದು ಸೂಚಿಸಿದ್ದರು. ಅರ್ಜಿದಾರರು 59,551 ರೂ. ಪಾವತಿಸಿದ್ದರು. ಸದ್ಯ ಕೋರ್ಟ್ ತೆರಿಗೆ ವಿಧಿಸಲು ಅವಕಾಶ ಇಲ್ಲ ಎಂದು ಅಭಿಪ್ರಾಯ ಪಟ್ಟಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ