ಮದುವೆಯ ಹಾಲ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 100 ಜನರು ಸಾವನ್ನಪ್ಪಿ, 150ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಇರಾಕ್‍ನಲ್ಲಿ (Northern Iraq) ನಡೆದಿದೆ. ಇರಾಕ್ ನ ನಿನೆವೆ ಪ್ರಾಂತ್ಯದ ಹಮ್ದನಿಯಾ (Nineveh Province) ಪ್ರದೇಶದಲ್ಲಿ ಬೆಂಕಿ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದು ಕ್ರಿಶ್ಚಿಯನ್ ಪ್ರದೇಶವಾಗಿದ್ದು, ಬೆಂಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರಲ್ಲಿ ಕೆಲವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎನ್ನಲಾಗುತ್ತಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪಟಾಕಿಯಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.