ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ.
ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲು ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಸದ್ಯದಲ್ಲಿಯೇ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸದ್ಯ ಬರದ ವಾತಾವರಣ ಇದ್ದರೂ ಮುಂದೆ ಮಳೆಯಾಗುವ ಸಾಧ್ಯತೆ ಇದೆ. ಕೃಷಿ ಸುಧಾರಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಕ್ಕಿ ಇಟ್ಟುಕೊಂಡು ನೀಡಲಿಲ್ಲ. ನಾವು ಕೇಂದ್ರಕ್ಕೆ ಪುಕ್ಕಟ್ಟೆಯಾಗಿ ನೀಡಿ ಎಂದು ಕೇಳಿಲ್ಲ. ದುಡ್ಡು ನೀಡುತ್ತೇವೆ ಕೊಡಿ ಎಂದು ಕೇಳಿದ್ದೇವು. ಆದರೆ, ಅಕ್ಕಿಯಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡ್ತಿದೆ. ಬಡವರ ಕಾರ್ಯಕ್ರಮಕ್ಕೆ ಅಕ್ಕಿ ಕೊಡಲು ಬಿಜೆಪಿಗೆ ಆಸಕ್ತಿ ಇಲ್ಲ ಎಂದು ಸಿಎಂ ಗರಂ ಆಗಿದ್ದಾರೆ ಎಂದು ಹೇಳಿದ್ದಾರೆ.
ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಹಾಲಿ ಪಡಿತರ ಅಕ್ಕಿ ಬದಲು ಪೂರಕ ಪೌಷ್ಟಿಕ ಆಹಾರ ನೀಡುವಂತೆ ಮನವಿ ಮಾಡಿದ್ದಾರೆ. 5 ಅಕ್ಕಿ ಜೊತೆಗೆ, ರಾಗಿ ಜೋಳ ಕಡಲೆಕಾಯಿ ಎಣ್ಣೆ ವಿತರಣೆ ಮಾಡಲು ಹೇಳಿದ್ದಾರೆ. ಬೃಹತ್ ಕಟಾವು ಹಬ್ ಸ್ಥಾಪಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಈ ವರ್ಷ 50 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಹೇಳಿದ್ದಾರೆ.