ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಶನಿವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್(LPG Cylinder)ಗಳ ಬೆಲೆ ಹೆಚ್ಚಿಸಿವೆ. ಅಕ್ಟೋಬರ್ 1 ರಿಂದ (ಇಂದು) ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 209 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್‌ಗೆ ರೂ 1731.50 ಆಗಲಿದೆ ಎಂದು ಮೂಲಗಳು ಹೇಳಿವೆ.
ಕೇಂದ್ರ ಸಚಿವ ಸಂಪುಟವು ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳನ್ನು ಅನುಮೋದಿಸಿದೆ. ಈ ಯೋಜನೆ ಮುಂದಿನ ವರ್ಷದಿಂದ ಜಾರಿಗೆ ಬರಲಿದೆ. ಗ್ರಾಮೀಣ ಕುಟುಂಬಗಳ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಡುಗೆಗಾಗಿ ಮರವನ್ನು ಅವಲಂಬಿಸಿರುವ ಕುಟುಂಬಗಳಿಗೆ 75 ಲಕ್ಷ ಹೊಸ ಸಂಪರ್ಕಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ, ಈಗ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಶಾಕ್ ಎದುರಾಗಿದ್ದು, ಭಾರೀ ದರ ಏರಿಕೆಯಾಗಿದೆ.