ನಟಿ ರಚಿತಾ ರಾಮ್ ತಮ್ಮ ಹುಟ್ಟು ಹಬ್ಬದ ಕುರಿತು ಅಭಿಮಾನಿಗಳಿಗೆ ಸಂದೇಶವೊಂದು ನೀಡಿದ್ದಾರೆ. ಅವರು ಈ ಕುರಿತು ಟ್ವೀಟ್ ಮಾಡಿದ್ದು, ‘ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ’ ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
“ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ ನನ್ನ ಜನ್ಮ,ದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ .. ನಿಮ್ಮ ರಚ್ಚು” ಎಂದು ಬರೆದು ರೆಡ್ ಲವ್ ಇಮೋಜಿ ಹಾಕಿ ಅಭಿಮಾನಿಗಳಿಗೆ ವಿನಂತಿಸಿಕೊಂಡಿದ್ದಾರೆ.
ರಚಿತಾ ರಾಮ್ ಹುಟ್ಟುಹಬ್ಬವು (Rachita Ram Birthday) ಅಕ್ಟೋಬರ್ 3ಕ್ಕೆ ಇದೆ. ಆದರೆ, ಈ ವರ್ಷ ತಮ್ಮ ಬರ್ತ್‌ಡೇಯನ್ನು ಅಭಿಮಾನಿಗಳೊಂದಿಗೆ ಗ್ರಾಂಡ್ ಆಗಿ ಸೆಲೆಬ್ರೇಟ್ ಮಾಡದಿರಲು ನಿರ್ಧರಿಸಿದ್ದಾರೆ. ಜನರು ಬಳಕೆಗೆ ಕಾವೇರಿ ನೀರು ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಈ ಸಮಯದಲ್ಲಿ ತಾವು ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧಾರ ಮಾಡಿರುವುದಾಗಿ ಹೇಳಿದ್ದಾರೆ. ಇದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.