ನವದೆಹಲಿ: ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ (ISIS) ಉಗ್ರನನ್ನು (Suspected Terrorist) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎನ್ನಲಾಗಿದೆ.
ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮ ಬಂಧಿತ ಉಗ್ರ ಎನ್ನಲಾಗಿದ್ದು, ಈತ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಶಹನವಾಜ್ ಪುಣೆ ಮಾಡ್ಯೂಲ್ ಪ್ರಕರಣದ ಆರೋಪಿಯಾಗಿದ್ದ. ಈತ ಮೂಲತಃ ದೆಹಲಿಯವನು ಎನ್ನಲಾಗಿದೆ. ಇತ್ತೀಚೆಗೆ ಈತನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ಆದರೆ, ತಪ್ಪಿಸಿಕೊಂಡು ದೆಹಲಿಯ ಅಡಗುತಾಣವೊಂದರಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನು ಮತ್ತೆ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.
ಈ ಹಿಂದೆ ಶಹನವಾಜ್ ಮತ್ತು ಇತರ ಮೂವರು ಶಂಕಿತ ಉಗ್ರರಾದ ರಿಜ್ವಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲ ಮತ್ತು ತಲ್ಹಾ ಲಿಯಾಕತ್ ಖಾನ್ ಕುರಿತು ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ರೂ. ನಗದು ಬಹುಮಾನ ಕೊಡುವುದಾಗಿ ಎನ್‌ಐಎ ಘೋಷಿಸಿತ್ತು