ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric car) ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ನಗರದಲ್ಲಿ ನಡೆದಿದೆ.
ದಕ್ಷಿಣ ಬೆಂಗಳೂರು ಜೆಪಿ ನಗರದ ದಾಲ್ಮಿಯಾ ಮೇಲ್ಸೇತುವೆಯಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಈ ಎಲೆಕ್ಟ್ರಿಕ್ ಕಾರನ್ನು ಸ್ವತಃ ಮಾಲೀಕರೆ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಮುಂದಿನ ಕಾರು ಬಾನೆಟ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರು ನಿಲ್ಲಿಸಿ ಹೊರಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಡಾಲ್ಮಿಯ ಮೇಲ್ಸೇತುವೆ ಮೇಲೆ ಹೋಗುತ್ತಿತ್ತು. ಕಾರು ಹೊತ್ತಿ ಉರಿದಿದೆ. ಬೆಂಕಿ ಜ್ವಾಲೆ, ಹೊಗೆ ದಟ್ಟವಾಗಿ ಮೇಲೆಳಿತು ಎಂದು ಪುಟ್ಟೇನಹಳ್ಳಿ ರಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.