Kornersite

Bengaluru Just In Karnataka Sports

SL vs ENG: ಇಂಗ್ಲೆಂಡ್ ವಿರುದ್ದ 5ನೇ ಬಾರಿ ಗೆದ್ದ ಶ್ರೀಲಂಕಾ

ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ್. ನಂತರ ಬಂದ ಜೋ ರೂಟ್ ಮೂರು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಜೋಸ್ ಬಟ್ಲರ್ 8 ರನ್ ಗಳಿಸಿದೆ. ಮತ್ತೊಂದೆಡೆ ಬೆನ್ ಸ್ಟ್ರೋಕ್ಸ್ 43 ರನ್ ಬಾರಿಸಿ ನಿರ್ಗಮಿಸಿದರು. ಅಂತೀಮವಾಗಿ ಇಂಗ್ಲೆಂಡ್ ತಂಡವು 33.2 ಓವರ್ ಗಳಲ್ಲಿ 156 ರನ್ ಗಳಿಸಿ ಆಲೌಟ್ ಆಯಿತು.

ಶ್ರೀಲಂಕಾ ಪರ ಲಹಿರು ಕುಮಾರ್ 3 ವಿಕೆಟ್ ಪಡೆದರೆ, ಕುಸುಮ್ ರಜಿತ್ ಹಾಗೂ ಏಂಜೆಲೊ ಮ್ಯಾಥ್ಯೂಸ್ ಎರಡು ವಿಕೆಟ್ ಪಡೆದರು. ಈ ಮೂಲಕ 25.4 ಓವರ್ ಗಳಲ್ಲಿ 160 ರನ್ ಬಾರಿಸುವ ಮೂಲಕ ಶ್ರೀಲಂಕಾ ತಂಡವು 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.