Bengaluru: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. 224 ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಕಾಂಗ್ರೆಸ್ ಗೆ ಕೆಲವು ಪ್ರಮುಖ ಕ್ಷೇತ್ರಗಳಲ್ಲಿಯೇ ಸೂಕ್ತ ಅಭ್ಯರ್ಥಿಗಳು ಇಲ್ಲದಂತಾಗಿದೆ.
ಚನ್ನಪಟ್ಟಣ, ಯಶವಂತಪುರ, ಕೆ.ಆರ್.ಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.
ಸ್ಕ್ರೀನಿಂಗ್ ಸಮಿತಿಯಲ್ಲಿಯೂ ಈ ಕುರಿತು ಚರ್ಚೆ ನಡೆದಿದ್ದು, ಬೇರೆ ಯಾರನ್ನೊ ನಿಲ್ಲಿಸಬೇಕಾದ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದೋದಗಿದೆ. ಯಶವಂತಪುರದಿಂದ ಎಸ್‌ಟಿ ಸೋಮಶೇಖರ್, ಕೆಆರ್ ಪುರದಿಂದ ಭೈರತಿ ಬಸವರಾಜ್, ಚಿಕ್ಕಬಳ್ಳಾಪುರದಿಂದ ಸುಧಾಕರ್ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್ ನ ಪ್ರಭಾವಿ ನಾಯಕರಾಗಿದ್ದ ಇವರು, ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದರು. ಹೀಗಾಗಿ ಇವರನ್ನು ಸೋಲಿಸಬೇಕಾದ ಜಿದ್ದು ಕಾಂಗ್ರೆಸ್ ಗೆ ಇದೆ. ಆದರೆ, ಅವರ ವಿರುದ್ಧ ಸ್ಪರ್ಧಿಸುವ ಪ್ರಭಲ ವ್ಯಕ್ತಿಗಳು ಇಲ್ಲದಾಗಿದೆ. ಇನ್ನುಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ