Kornersite

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಿ ಲಿಸ್ಟ್ ಬಿಡುಗಡೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪಕ್ಷದ ವಿರುದ್ಧ ಆಕ್ರೋಶ ಅಷ್ಟಾಗಿ ಇರಲಿಲ್ಲ. ಆದರೆ, ಎರಡನೇ ಪಟ್ಟಿಯಲ್ಲಿ ಕೆಲವು ಕ್ಷೇತ್ರಗಳಲ್ಲಿನ ನಾಯಕರಿಗೆ ಬೇಸರವಾಗಿದೆ. ಟಿಕೆಟ್ ಸಿಗುತ್ತದೆ ಎಂದು ಭರವಸೆ ಇಟ್ಟುಕೊಂಡಿದ್ದ ನಾಯಕರಿಗೆ ಟಿಕೆಟ್ ಸಿಗದೆ ನಿರಾಸೆ ಮೂಡಿಸಿದೆ.
ಈಗಾಗಲೇ 224 ಕ್ಷೇತ್ರಗಳ ಪೈಕಿ ಈಗಾಗಲೇ ಕಾಂಗ್ರೆಸ್ 166 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಆದರೆ, ಬಂಡಾಯ ಹಾಗೂ ಹೆಚ್ಚು ಆಕಾಂಕ್ಷಿತರಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಅಂತಹ 58 ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಹಾಗೂ ಅಲ್ಲಿನ ಅಸಮಾಧಾನವನ್ನು ಯಾವ ರೀತಿ ಹತ್ತಿಕ್ಕ ಬೇಕು ಎಂದು ಕಾಂಗ್ರೆಸ್ ನಾಯಕರು ಈಗ ಚಿಂತೆಗೆ ಈಡಾಗಿದ್ದಾರೆ.
ಹೀಗಾಗಿಯೇ ಇನ್ನುಳಿದ ಕ್ಷೇತ್ರಗಳಲ್ಲಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್‌ ಗೆ ಸಾಕಷ್ಟು ಗೊಂದಲವಿರುವ ಕ್ಷೇತ್ರಗಳನ್ನು ಮುಟ್ಟದೆ, ಗೊಂದಲಗಳಿಲ್ಲದ ಕ್ಷೇತ್ರಗಳಿಗೆ ಟಿಕೆಟ್‌ ನೀಡಿದೆ. ಚಿಕ್ಕಮಗಳೂರು, ತರೀಕೆರೆ, ಮೂಡಿಗೆರೆ ಗೊಂದಲ, ಬಂಡಾಯ ಎದುರಿಸುವ ಕ್ಷೇತ್ರಗಳಾಗಿವೆ. ಅತ್ಯಂತ ಕುತೂಹಲಕಾರಿ ಕ್ಷೇತ್ರ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿದ್ದು, ಮೂಡಿಗೆರೆ ಹಾಗೂ ತರೀಕೆರೆ ಕ್ಷೇತ್ರಗಳಲ್ಲಿಯೂ ಟಿಕೆಟ್‌ ಗೊಂದಲ ಮುಂದುವರೆದಿದೆ. ಕಡೂರಿನಲ್ಲಿ ಈ ಬಾರಿ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ವೈ ಎಸ್‌ ವಿ ದತ್ತ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಕಲಘಟಗಿ ಕ್ಷೇತ್ರದಲ್ಲಿ ನಾಗರಾಜ ಛಬ್ಬಿ ಬದಲು ಮತ್ತೊಮ್ಮೆ ಸಂತೋಷ್ ಲಾಡ್ ಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾವಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮಣೆ ಹಾಕಲಾಗುತ್ತದೆ ಎಂದು ಎಲ್ಲರು ಊಹಿಸಿದ್ದರು. ಆದರೆ, ವಿನಯ ಕುಲಕರ್ಣಿ ಅವರಿಗೆ ಧಾರವಾಡ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಈಗಾಗಲೇ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ, ಪುಲುಕೇಶಿನಗರದ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್ ಘೋಷಣೆಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಕಾಯ್ದಿರಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಹೆಸರು ಕೈ ತಪ್ಪಿದ ಹಿನ್ನೆಲೆ ಎರಡನೇ ಪಟ್ಟಿಗಾಗಿ ಕಾಯುತಿದ್ದ ಅಖಂಡಗೆ ಶ್ರೀನಿವಾಸ್‌ಮೂರ್ತಿಗೆ ಮತ್ತೆ ಬೇಸರವಾಗಿದೆ. ಹಾಸನ ಕ್ಷೇತ್ರದ ಅಭ್ಯರ್ಥಿಯ ಕುರಿತು ಜೆಡಿಎಸ್ ನಂತೆ ಕಾಂಗ್ರೆಸ್ ನಲ್ಲಿಯೂ ಕಗ್ಗಂಟಾಗಿಯೇ ಉಳಿದಿದೆ. ಆದರೆ, ಜೆಡಿಎಸ್ ನ ಅಭ್ಯರ್ಥಿ ನೋಡಿ, ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿಯೇ ಕಾಯ್ದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ. ಒಂದು ವೇಳೆ ಜೆಡಿಎಸ್‌ ನಿಂದ ಸ್ವರೂಪ್ ಗೆ ಟಿಕೆಟ್ ಅಂತಿಮವಾಗದಿದ್ದರೆ, ಅವರಿಗೆ ಟಿಕೆಟ್ ನೀಡಿ ಅನುಕಂಪದ ಅಲೆ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ತಂತ್ರ ಹೆಣೆದಿದೆ. ಒಟ್ಟಾರೆ ಮುಂದಿನ ಪಟ್ಟಿ ಕಾಂಗ್ರೆಸ್ ಪಾಲಿಗೆ ಭಾರೀ ಕಂಟಕವಾಗುವುದರಲ್ಲಿ ಸಂಶಯವೇ ಇಲ್ಲ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು