ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2 ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಣೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿಯ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳಗ್ಗೆ ಹಾಗೂ ಸಂಜೆ ಮೋಡ ಕವಿದ ರೀತಿಯ ವಾತಾವರಣವಿರಲಿದ್ದು, ಶುಭ್ರ ಆಕಾಶವಿರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಗೋಕಾಕ್, ಬೈಲಹೊಂಗಲ, ಔರಾದ್, ಮುಂಡಗೋಡ, ನರಗುಂದ, ಬೆಳಗಾವಿ, ಖಜೂರಿ, ಹುಮನಾಬಾದ್, ಶೃಂಗೇರಿಯಲ್ಲಿ ಮಳೆಯಾಗಿದೆ.

ಧಾರವಾಡದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಬೆಂಗಳೂರಿನ ಎಚ್ಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಸನದಲ್ಲಿ ಕೂಡ ಮಳೆಯಾಗಲು ಆರಂಭವಾಗಿದೆ. ಹಲವೆಡೆ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡರೆ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.