Kornersite

Bengaluru Just In Karnataka State

Karnataka Assembly Election 2023: ರಾಜಕೀಯ ನಿವೃತ್ತಿ ಪಡೆಯುವಂತೆ ಹೈಕಮಾಂಡ್ ಕರೆ; ಏನಂದ್ರು ಜಗದೀಶ್ ಶೆಟ್ಟರ್?

Hubballi : ಹಿರಿಯ ನಾಯಕರನ್ನು ಈ ರೀತಿ ನಡೆಸಿಕೊಳ್ಳಬಾರದು. 30 ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಈ ರೀತಿ ಮಾಡಬಾರದು. ಹೈಕಮಾಂಡ್ ಟಿಕೆಟ್ ನೀಡದಿದ್ದರೂ ನಾನು ಚುನಾವಣೆಯಲ್ಲಿ(Election) ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿದ್ದು ನಿಜ. ನೀವು ಹಿರಿಯರಿದ್ದೀರಿ. ಕಿರಿಯರಿಗೆ ಅವಕಾಶ ನೀಡಬೇಕಾಗಿದೆ. ಹೀಗಾಗಿ ನೀವು ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಹೈಕಮಾಂಡ್ (High Command) ಕೇಳಿದರು. ಆದರೆ ನನಗೆ ಪಕ್ಷದ ವರಿಷ್ಠರ ಮೇಲೆ ನಂಬಿಕೆಯಿದೆ. ಸರಿಯಾದ ಸ್ಥಾನಮಾನವನ್ನು ಕೊಡುತ್ತೇವೆ ಬಂದು ಭೇಟಿಯಾಗಿ ಎಂದಿದ್ದಾರೆ ಎಂದು ಹೇಳಿದರು.

30 ವರ್ಷಗಳಿಂದ ನಾನು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೈಕಮಾಂಡ್ ಬಳಿ ಹೇಳಿದ್ದೇನೆ. ಅಲ್ಲದೇ ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸವನ್ನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲು ಕಾರಣವೇನು? ಈ ಕ್ಷೇತ್ರದಲ್ಲಿ ನನ್ನ ಕುರಿತು ಪಾಸಿಟಿವ್ ಇದೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನಿಯತ್ತಾಗಿ ಕೆಲಸ ಮಾಡಿದ್ದಕ್ಕಾಗಿ ನನಗೆ ಈ ಶಿಕ್ಷೆ ನೀಡುತ್ತಿದ್ದೀರಾ. ಹೈಕಮಾಂಡ್ ಈ ರೀತಿ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರಾಗಿದೆ ಎಂದರು.


ನನಗೆ ಟಿಕೆಟ್ ತಪ್ಪಿಸಲು ಮೈನಸ್ ಪಾಯಿಂಟ್ ಏನಾದರು ಇದ್ದರೆ ಹೇಳಿ. ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ನಾನು ಹುಬ್ಬಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ. ನಾನು ಅವರಿಗಾಗಿ ಮತ್ತೊಮ್ಮೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈಶ್ವರಪ್ಪ (K.S.Eshwarappa) ಅವರ ನಿರ್ಧಾರ ಬೇರೆ. ನನ್ನ ನಿರ್ಧಾರವೇ ಬೇರೆ. ಶೆಟ್ಟರ್ ರಾಜಕಾರಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾನು ಇನ್ನೂ ಹತ್ತು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ (Politics) ಇರುತ್ತೇನೆ. ಪಕ್ಷ ಟಿಕೆಟ್ ಕೊಟ್ಟರೂ ಕಣದಲ್ಲಿ ಇರುತ್ತೇನೆ. ಕೊಡದಿದ್ದರೂ ಕಣದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ