Kornersite

Just In Sports

IPL 2023 : ಗೆಲುವಿನ ಖಾತೆ ತೆರೆದ ಮುಂಬಯಿ; ಸೋಲಿನ ಹಳಿ ಬಿಡದ ಡೆಲ್ಲಿ!

Mumbai : ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ (Mumbai Indians) ತಂಡಲು ಗೆಲುವು ಸಾಧಿಸುವುದರ ಮೂಲಕ ಗೆಲುವಿನ ಖಾತೆ ತೆರೆದರೆ, ಡೆಲ್ಲಿ ಸೋಲಿನ ಸರಪಳಿಯಲ್ಲಿ ಸಿಲುಕಿದೆ.


ರೋಹಿತ್‌ ಶರ್ಮಾ (Rohit Sharma) ಅವರ ಜವಾಬ್ದಾರಿಯುತ ಹಾಗೂ ಭರ್ಜರಿ ಅರ್ಧ ಶತಕದ ನೆರವಿನಿಂದ ಮುಂಬಯಿ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 6 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ 2023 ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆದಿದೆ. ಆದರೆ ಡೆಲ್ಲಿ ಸತತ 4ನೇ ಸೋಲಿನೊಂದಿಗೆ ಸೋಲಿನೊಂದಿಗೆ ಹಿನ್ನಡೆ ಅನುಭವಿಸುತ್ತ ಸಾಗುತ್ತಿದೆ.


ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 19.4 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 172 ರನ್‌ ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ಇಂಡಿಯನ್ಸ್ ತಂಡವು ನಿಗದಿತ ಓವರ್ ಗಳಲ್ಲಿ ಹೋರಾಟ ನಡಿಸಿ, ತಿಣುಕಾಡಿ ಕೊನೆಯ ಬೌಲ್ ನಲ್ಲಿ ರೋಚಕ ಗೆಲುವು ಸಾಧಿಸಿತು.


ಮುಂಬಯಿ ಪರ ರೋಹಿತ್‌ ಶರ್ಮಾ 45 ಎಸೆತಗಳಲ್ಲಿ 65 ರನ್‌ (6 ಬೌಂಡರಿ, 4 ಸಿಕ್ಸರ್‌), ಇಶಾನ್‌ ಕಿಶನ್‌ 31 ರನ್‌ ಹಾಗೂ ತಿಲಕ್‌ ವರ್ಮಾ 29 ಎಸೆತಗಳಲ್ಲಿ 4 ಸಿಕ್ಸರ್‌, 1 ಬೌಂಡರಿ ನೆರವಿನೊಂದಿಗೆ 41 ರನ್‌ ಗಳಿಸುವ ಮೂಲಕ ತಂಡಕ್ಕೆ ಜಯ ತಂದುಕೊಡುವಲ್ಲಿ ಯಶಸ್ವಿಯಾದರು. ಡೆಲ್ಲಿ ತಂಡದ ಪರ ಮುಕೇಶ್‌ ಕುಮಾರ್‌ 2 ವಿಕೆಟ್‌ ಕಿತ್ತರೆ ಮುಸ್ತಫರ್‌ ರೆಹ್ಮಾನ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.


ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಪರ ಡೇವಿಡ್‌ ವಾರ್ನರ್‌ (David Warner) ಮಂದಗತಿಯ ಬ್ಯಾಟಿಂಗ್‌ ನಡೆಸಿ 47 ಎಸೆತಗಳಲ್ಲಿ 51 ರನ್‌ ಗಳಿಸಿದರೆ, ಕೊನೆಯಲ್ಲಿ ಅಕ್ಷರ್‌ ಪಟೇಲ್‌ (Axar Patel) 25 ಎಸೆತಗಳಲ್ಲಿ ಸ್ಫೋಟಕ 54 ರನ್‌ (5 ಸಿಕ್ಸರ್‌, 4 ಬೌಂಡರಿ) ಗಳಿಸಿದರು. ಈ ಮೂಲಕ ಅವರು ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಮುಂಬಯಿ ತಂಡದ ಪರ ಪಿಯೂಷ್‌ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್ ತಲಾ ಮೂರು ವಿಕೆಟ್‌ ಕಿತ್ತರೆ, ರಿಲೆ ಮೆರೆಡಿತ್ 2 ವಿಕೆಟ್‌, ಹೃತಿಕ್ ಶೋಕೀನ್ ಒಂದು ವಿಕೆಟ್‌ ಪಡೆದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್