Kornersite

Bengaluru Just In Karnataka State

Karnataka Assembly Election: ತಪ್ಪಿದ ಬಿಜೆಪಿ ಟಿಕೆಟ್ – ಕಣ್ಣೀರು ಸುರಿಸಿದ ಲಕ್ಷ್ಮಣ!

Chkkkodi : ನಿರೀಕ್ಷೆಯಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಅವರಿಗೆ ಟಿಕೆಟ್ ಕೈ ತಪ್ಪಿದೆ. ಇದರ ಬೆನ್ನಲ್ಲಿಯೇ ಅವರು ವೇದಿಕೆಯ ಮೇಲೆಯೇ ಕಣ್ಣೀರು ಹಾಕಿದ್ದಾರೆ.



ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು, ನನಗೆ ಪಕ್ಷದ ಮೇಲೆ ದ್ವೇಷವಿಲ್ಲ. ಪಕ್ಷ ಒಳ್ಳೆಯದು. ರಾಷ್ಟ್ರ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಬೆಳೆದು ನಿಂತಿದೆ. ಆದರೆ ರಾಜ್ಯಮಟ್ಟದಲ್ಲಿರುವ ಕೆಲ ನಾಯಕರು ಲಕ್ಷ್ಮಣ ಸವದಿ ಅವಶ್ಯಕತೆ ಇಲ್ಲ ಎಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾರೆ. ಆದರೂ ಬಿಜೆಪಿಯ ಹಿರಿಯ ನಾಯಕರಿಗೆ ಅಭಿನಂದನೆ ತಿಳಿಸಿ, ಜನರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ತೀರ್ಮಾನವನ್ನು ನಾನು ಸದ್ಯದಲ್ಲಿಯೇ ಪ್ರಕಟಿಸುತ್ತೇನೆ. ನಮ್ಮ ಸಮಾಜ ಎಂದಿಗೂ ಕೈ ಬಿಟ್ಟಿಲ್ಲ. ರಾಜಕೀಯವಾಗಿ ಸಾಕಿ ಸಲುಹಿದ್ದಾರೆ. ಅವರಿಗೆ ನಾನೆಂದೂ ಋಣಿ ಆಗಿರುತ್ತೇನೆ ಎಂದು ಭಾವುಕರಾಗಿ ನುಡಿದಿದ್ದಾರೆ.


ಕಳೆದ ಮೂರು ದಿನಗಳಿಂದ ಬಿಜೆಪಿ (BJP) ಹೈಕಮಾಂಡ್ ಸರಣಿ ಸಭೆ ನಡೆಸಿತ್ತು. ಅಲ್ಲದೇ, ನಿನ್ನೆ ರಾತ್ರಿ ಬಿಜೆಪಿಯಿಂದ ಕರ್ನಾಟಕ ಚುನಾವಣೆಗೆ (Karnataka Election) ಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು ಕೇವಲ 35 ಕ್ಷೇತ್ರಗಳನ್ನು ಹೈಕಮಾಂಡ್ ಬಾಕಿ ಉಳಿಸಿಕೊಂಡಿದೆ. ಈ ಬಾರಿ ಅನೇಕ ಮುಖಂಡರ ನಡುವೆ ಟಿಕೆಟ್‍ಗಾಗಿ ಪೈಪೋಟಿ ನಡೆದಿತ್ತು.


ಅಥಣಿ ಕ್ಷೇತ್ರಕ್ಕೂ ಬಿಜೆಪಿ ನಾಯಕರಾದ ಲಕ್ಷ್ಮಣ ಸವದಿ ಹಾಗೂ ಮಹೇಶ್ ಕುಮಟಳ್ಳಿ ಮಧ್ಯೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ ಕೊನೆಘಳಿಗೆಯಲ್ಲಿ ಲಕ್ಷ್ಮಣ್ ಸವದಿಗೆ ಟಿಕೆಟ್ ಕೈ ತಪ್ಪಿದ್ದು, ಮಹೇಶ್ ಕಮಟಳ್ಳಿಗೆ ಟಿಕೆಟ್ ಘೋಷಣೆಯಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ