Kornersite

Bengaluru Just In Karnataka State

Exclusive Story : ಬೆಳಗಾವಿಯ 18 ಕ್ಷೇತ್ರಗಳ ಪೈಕಿ 8ರಲ್ಲಿ ಬಂಡಾಯ?

Belagavi : ಬೆಂಗಳೂರು ನಗರ ಬಿಟ್ಟರೆ ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳಿವೆ. ಬೆಳಗಾವಿಯಲ್ಲಿ (Belagavi) 18 ವಿಧಾನಸಭಾ ಕ್ಷೇತ್ರಗಳಿದ್ದು, ಸದ್ಯ ವಿಧಾನಸಭಾ ಚುನಾವಾಣೆ (Karnataka Assembly Election) ಹಿನ್ನೆಲೆಯಲ್ಲಿ ಈ ಜಿಲ್ಲೆಯ ಮೇಲೆಯೇ ಎಲ್ಲ ಪಕ್ಷಗಳು ಕಣ್ಣು ನೆಟ್ಟಿದೆ. ಬಿಜೆಪಿ (BJP) ಪಕ್ಷವು ನಿನ್ನೆ (ಏ.11) ರಾತ್ರಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ 18 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ. ಆದರೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi), ಇಬ್ಬರು ಹಾಲಿ ಶಾಸಕರು ಸೇರಿದಂತೆ 8 ಜನ ಆಕಾಂಕ್ಷಿಗಳಿಗೆ ಟಿಕೆಟ್ ತಪ್ಪಿದ್ದು, ಬಂಡಾಯ ಏಳುತ್ತಿದ್ದಾರೆ.

ಅಥಣಿ, ಯಮಕನಮರಡಿ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ಖಾನಾಪುರ, ಬೈಲಹೊಂಗಲ, ಸವದತ್ತಿ, ರಾಮದುರ್ಗದಲ್ಲಿ ಆಕಾಂಕ್ಷಿಗಳಿಗೆ ಟಿಕೆಟ್ ತಪ್ಪಿದೆ. ಹೀಗಾಗಿ ಅವರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ. ಈಗಾಗಲೇ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರಬಹುದು ಎನ್ನಲಾಗುತ್ತಿದೆ.


ಯಮಕನಮರಡಿಯಲ್ಲಿ ಮಾರುತಿ ಅಷ್ಟಗಿಗೆ ಟಿಕೆಟ್ ಕೈ ತಪ್ಪಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ್ ಬೆನಕೆ, ಬೆಳಗಾವಿ ಗ್ರಾಮೀಣದಲ್ಲಿ ಸಂಜಯ್ ಪಾಟೀಲ್, ಖಾನಾಪುರದಲ್ಲಿ ಅರವಿಂದ ಪಾಟೀಲ್, ಬೈಲಹೊಂಗಲದಲ್ಲಿ ಡಾ. ವಿ.ಐ. ಪಾಟೀಲ್, ಸವದತ್ತಿಯಲ್ಲಿ ಬಸವರಾಜ ಪಟ್ಟಣಶೆಟ್ಟಿ, ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ಇವರೆಲ್ಲ ಪಕ್ಷದ ವಿರುದ್ಧ ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.


ಯುವಕರಿಗೆ ಟಿಕೆಟ್ ಸಿಗದಿದ್ದಕ್ಕೆ ತಡರಾತ್ರಿಯಿಂದಲೇ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಬೆಳಗಾವಿ ಉತ್ತರ, ರಾಮದುರ್ಗ ಕ್ಷೇತ್ರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ರಾಮದುರ್ಗದಲ್ಲಿ ಮಹಾದೇವಪ್ಪ ಯಾದವಾಡ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಶಾಸಕ ಅನಿಲ್ ಬೆನಕೆ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ತಡರಾತ್ರಿ ಬೆಳಗಾವಿಯ ಚನ್ನಮ್ಮ ವೃತ್ತ ಹಾಗೂ ಸಂಸದೆ ಮಂಗಲ ಅಂಗಡಿ ಮನೆ ಎದುರು ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಯಮಕನಮರಡಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾರುತಿ ಅಷ್ಟಗಿ ಬೆಂಬಲಿಗರ ಆಕ್ರೋಶ ವ್ಯಕ್ತಪಡಿಸಿ, ಧರಣಿ ಕೂತಿದ್ದಾರೆ.


ರಾಮದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವಲಸೆ ಬಂದ ಚಿಕ್ಕರೇವಣ್ಣ ಅವರಿಗೆ ಕುರುಬ ಸಮುದಾಯದ ಕೋಟಾದಡಿ ಬಿಜೆಪಿ ಮಣೆ ಹಾಕಿದೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಲಿಂಗಾಯತ ಕೋಟಾದಡಿ ಡಾ.ರವಿ ಪಾಟೀಲ್‌ ಟಿಕೆಟ್ ಸಿಕ್ಕಿದೆ. 18 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಿಗೆ ಹೊಸಬರನ್ನು ಆಯ್ಕೆ ಮಾಡಲಾಗಿದೆ.

ಹುಕ್ಕೇರಿ – ನಿಖಿಲ್ ಕತ್ತಿ, ಯಮಕನಮರಡಿ – ಬಸವರಾಜ ಹುಂದ್ರಿ, ಬೆಳಗಾವಿ ಉತ್ತರ – ಡಾ.ರವಿ ಪಾಟೀಲ್, ಬೆಳಗಾವಿ ಗ್ರಾಮೀಣ – ನಾಗೇಶ್ ಮನ್ನೋಳಕರ್, ಸವದತ್ತಿ – ಆನಂದ ಮಾಮನಿ, ರಾಮದುರ್ಗ – ಚಿಕ್ಕರೇವಣ್ಣ ಟಿಕೆಟ್ ಪಡೆದು ಮೊದಲ ಬಾರಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ