Kornersite

Bengaluru Just In Karnataka State

Karnataka Assembly Election 2023: ಮಗಳು ಬಿಜೆಪಿ ಸೇರಿದ್ದು, ಎದೆಗೆ ಚೂರಿ ಹಾಕಿದಂತಾಗಿದೆ- ಕಾಗೋಡು

ಶಿವಮೊಗ್ಗ : ಮಾಜಿ ಸಚಿವ ಹಾಗೂ ಕಾಂಗ್ರೆಸ್ (Congress)ನ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ(KagoduTimmappa) ಅವರ ಮಗಳು ಬಿಜೆಪಿ(BJP) ಸೇರಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.


ಮಗಳು ಬಿಜೆಪಿ (BJP) ಸೇರಿದ್ದು ನನ್ನ ಎದೆಗೆ ಚಾಕು ಹಾಕಿದಂತಾಗಿದೆ. ನನ್ನ ಮಗಳು ಈ ರೀತಿ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂದು ನಾನು ಕನಸಿನಲ್ಲಿಯೂ ಆಲೋಚನೆ ಮಾಡಿರಲಿಲ್ಲ. ಮಗಳು ಈ ರೀತಿ ಇದ್ದಾಳೆ ಎನ್ನುವುದು ನನ್ನ ದೌರ್ಭಾಗ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ (Kagodu Thimmappa) ಬೇಸರ ವ್ಯಕ್ತಪಡಿಸಿದ್ದಾರೆ.


ಸಾಗರದಲ್ಲಿ (Sagara) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರಿ ಡಾ.ರಾಜನಂದಿನಿ (Dr.Rajanandini) ಬಿಜೆಪಿ ಸೇರ್ಪಡೆ ವಿಚಾರವಾಗಿ ಬೇಸರ ವ್ಯಕ್ತಪಡಿಸಿದರು. ಈ ಸುದ್ದಿ ನನಗೆ ಈಗ ತಿಳಿದಿದೆ. ಈ ರೀತಿ ಮಾಡುತ್ತಾರೆ ಎಂದು ನಾನು ಕನಸಿನಲ್ಲಿಯೂ ಆಲೋಚಿಸಿರಲಿಲ್ಲ. ನಾನು ರಾಜಕಾರಣದಲ್ಲಿ (Politics) ಸ್ಥಿರತೆ ಮತ್ತು ಬದ್ಧತೆ ಉಳಿಸಿಕೊಂಡು ಬಂದವನು. ನಾವು ಅದನ್ನೇ ಅನುಸರಿಸಿಕೊಂಡು ಕಾರ್ಯರೂಪಕ್ಕೆ ತರುತ್ತಿದ್ದೇವೆ. ಆ ಸಂತೋಷ ಮತ್ತು ನೆಮ್ಮದಿ ನಮಗಿದೆ ಎಂದು ಹೇಳಿದ್ದಾರೆ.


ನಾನು ಮಾತ್ರ ಕಾಂಗ್ರೆಸ್ (Congress) ಬಿಟ್ಟು ಯಾವುದೇ ಕಾರಣಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಹಾಗೂ ಅದರ ಪರವಾಗಿ ಕೆಲಸ ಮಾಡುತ್ತೇನೆ. ಮಗಳಿಗೆ ಯಾರೋ ಹಿಂದಿನಿಂದ ಈ ರೀತಿ ಮಾಡಿಸಿದ್ದಾರೆ. ಅದು ಹಾಲಪ್ಪ ಇರಬಹುದು. ಅವಳನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಅವಳು ತನ್ನ ಬಳಿ ಯಾವುದೇ ಬೇಸರ ಹೇಳಿಕೊಂಡಿಲ್ಲ. ನಾನು ಅವಳನ್ನು ಖರ್ಗೆ (Mallikarjun Kharge) ಹತ್ತಿರ ಕರೆದುಕೊಂಡು ಹೋಗಿದ್ದೆ. ಅವಕಾಶ ಇದ್ದರೆ ನೋಡೋಣ ಎಂದಿದ್ದರು. ಕಾಂಗ್ರೆಸ್‌ನಲ್ಲಿಯೇ ಇದ್ದು ರಾಜಕೀಯವಾಗಿ ಬೆಳೆಯಬಹುದಾಗಿತ್ತು ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ