Kornersite

Bengaluru Just In Karnataka State

Karnataka Assembly Election 2023: ಮೇ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿರುವ ಆಯೋಗ!

Bangalore : ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯಂತೆ ಈಗಾಗಲೇ ರಾಜ್ಯದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ.

ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನ ಇರುವುದರಿಂದ ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ. ನಾಳೆ ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ (Press Release) ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ