Kornersite

Bengaluru Karnataka State

Breaking News: ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ಇರುವವರು ಯಾರು? ಎಂ.ಬಿ. ಪಾಟೀಲ್ ಹೇಳಿದ್ದೇನು?

Bangalore : ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗುತ್ತಾರೆ ಎಂಬ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಕಾಂಗ್ರೆಸ್ ನ ನಾಯಕರಲ್ಲಿ ಕೂಡ ಪೈಪೋಟಿ ಜೋರಾಗಿದೆ. ಒಬ್ಬರಿಗೊಬ್ಬರು ಕಾಲೆಳೆಯುವುದು, ಸೋಲಿಸುವ ತಂತ್ರ- ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದರ ಮಧ್ಯೆ ಈಗ ಎಂ.ಬಿ. ಪಾಟೀಲ್ ಸಿಎಂ ಕುರಿತು ಮಾತನಾಡಿದ್ದಾರೆ.

ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ (M.B.Patil) ಹೇಳಿಕೆ ಎಲ್ಲರಿಗೂ ಶಾಕ್ ನೀಡುವಂತಿದೆ.


ಸಿಎಂ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನೇ ಮುಂದಿಟ್ಟಿರುವ ಎಂ.ಬಿ.ಪಾಟೀಲ್, ಯಾರು ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬುದನ್ನೂ ತಿಳಿಸಿದ್ದಾರೆ. ಆ ಮೂಲಕ ಕೈ ಪಾಳಯದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಹಲವು ನಾಯಕರು ಸಮರ್ಥರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳ ಮುಖ್ಯಸ್ಥರು ಖರ್ಗೆ. ಸಿಎಂ ಆಗುವ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದೇಶಪಾಂಡೆ (R.V.Deshpande) ಇದ್ದಾರೆ. ಎರಡನೇ ಸಾಲಿನಲ್ಲಿ ನಾನು, ಡಿಕೆಶಿ (D.K.Shivakumar), ಹೆಚ್.ಕೆ.ಪಾಟೀಲ್, ಪರಮೇಶ್ವರ್ (Parameshwar), ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ ಇದ್ದೇವೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.


ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ತಯಾರಿ ನಡೆಯುತ್ತಿದೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಡೆ ಇಳಿಸಿದ್ರು? ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡಿದ್ದಾರೆ. ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ ಎಂದು ವ್ಯಂಗ್ಯವಾಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ