(Bihar) ದಲ್ಲಿ ಮದ್ಯ ನಿಷೇಧವಿದ್ದರೂ ನಕಲಿ ಮದ್ಯ ಸೇವಿಸಿ ಸಾವನ್ನಪ್ಪುತ್ತಿರುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇವೆ. ಈಗ ಮತ್ತೆ ಇಂತಹ ಘಟನೆಯೊಂದು ಬೆಳಕಿಗೆ ಬಂದಿದ್ದು, 22 ಜನ ಸಾವನ್ನಪ್ಪಿದ್ದಾರೆ.
ಬಿಹಾರದ ಮೋತಿಹಾರಿ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದಲ್ಲಿ 22 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 2016ರಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಯ ಮೇಲೆ ಸಂಪೂರ್ಣ ನಿಷೇಧ ಹೇರಿತ್ತು.

ಇದು ಗಮನಾರ್ಹ ಸಂಖ್ಯೆಯ ಮಹಿಳಾ ಮತದಾರರನ್ನು ಸೆಳೆದಿತ್ತು. ನಿಷೇಧದ ಹೊರತಾಗಿಯೂ ರಾಜ್ಯದ ಕಾಳಸಂತೆಯಲ್ಲಿ ಮದ್ಯ ಮಾರಾಟ ನಡೆಯುತ್ತಿದ್ದು, ಸ್ಥಳೀಯವಾಗಿ ತಯಾರಿಸಿದ ಮದ್ಯ ಸೇವಿಸಿ ಸಾವುಗಳು ಸಂಭವಿಸುತ್ತಲೇ ಇವೆ. ಬಿಹಾರದಲ್ಲಿ ಮತ್ತೊಮ್ಮೆ ವಿಷಪೂರಿತ ಮದ್ಯ ಪ್ರಕರಣ ಮುನ್ನಲೆಗೆ ಬಂದಿದೆ.
ಮೋತಿಹಾರಿ ಜಿಲ್ಲೆಯಲ್ಲಿ ನಕಲಿ ಮದ್ಯದ ಹಾವಳಿ ಮತ್ತೊಮ್ಮೆ ಕಂಡು ಬಂದಿದೆ. ವಾಸ್ತವವಾಗಿ, ಪೂರ್ವ ಚಂಪಾರಣ್‌ನಲ್ಲಿ 22 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.