ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ ಜೆಲ್ಲೆಯ ಕೆಲವು ತಾಲೂಕುಗಳು ಸೇರಿದಂತೆ ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಯೊಂದರಲ್ಲಿ ಉತ್ತಮ ಮಳೆಯಾಗಿದೆ. ಒಂದು ದಿನದ ಅವಧಿಯಲ್ಲಿ 23.5 ಮಿಲೀ ಮೀಟರ್ ಮಳೆ ಸುರಿದಿದೆ. ಕಲ್ಯಾಣ ಕರ್ನಾಟಕದ ಬೀದರ್ ಜಿಲ್ಲೆಯ ಅಮಲಾಪುರದಲ್ಲಿ ಏಪ್ರಿಲ್ 13ರಿಂದ ಏಪ್ರಿಲ್ 14ರ ಒಂದು ದಿನದ ಅವಧಿಯಲ್ಲಿ 23.5 ಮಿಲೀ ಲೀಟರ್ ಮಳೆ ಸುರಿದಿದೆ. ಇದು ಇಡೀ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಮಳೆ ಇದಾಗಿದೆ.