Kornersite

Just In Karnataka National State

Corona Udapte: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಸೋಂಕು!

NewDelhi: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದೆ. ಕಳೆದ 24 ಗಂಟೆಗಳಲ್ಲಿ 10,093 ಜನರಲ್ಲಿ ಕೊರೊನಾ (Corona) ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,093 ಹೊಸ ಕೊರೊನಾ ಸೋಂಕುಗಳು ದಾಖಲಾಗಿವೆ. ಶನಿವಾರ ದೇಶದಲ್ಲಿ 10,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಶುಕ್ರವಾರ ದೇಶದಲ್ಲಿ 11,109 ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಈ ಮೂಲಕ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 57,542 ಆಗಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ 660 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದು ದಿನದ ಹಿಂದೆ 1152 ಮಂದಿಗೆ ಸೋಂಕು ತಗುಲಿತ್ತು. ಎರಡು ಸಾವುಗಳು ದಾಖಲಾಗಿತ್ತು. ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳ ಕಂಡ ಬಳಿಕ ಕಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು(Coronovirus) ಅಂತ್ಯವಾಗುವಂತೆ ಕಾಣುತ್ತಿಲ್ಲ. ಕೆಲವು ತಿಂಗಳ ಕಾಲ ಕಡಿಮೆಯಾಗಿದ್ದ ಸೋಂಕು ಮತ್ತೆ ವೇಗವಾಗಿ ಹಬ್ಬುತ್ತಿದೆ. ಡೆಲ್ಟಾ, ಓಮಿಕ್ರಾನ್ ನಂತರ ಈಗ ಹೊಸ ರೂಪಾಂತರವು ಜನ್ಮ ತಳೆದಿದೆ ಅದರ ಹೆಸರು ಆರ್ಕ್ಟರಸ್ (XBB.1.16) Arcturus. ಇದು ಓಮಿಕ್ರಾನ್ಗಿಂತ ಸಾಕಷ್ಟು ಭಿನ್ನವಾದ ಲಕ್ಷಣಗಳನ್ನು ಹೊಂದಿದೆ. ಇದು ಯುಎಸ್, ಸಿಂಗಾಪುರ್, ಆಸ್ಟ್ರೇಲಿಯಾದಂತಹ ಹಲವು ದೇಶಗಳಲ್ಲಿ ಕಂಡು ಬಂದಿದೆ.

ಈ ರೂಪಾಂತರಿಯು ವಿಪರೀತ ಜ್ವರ, ನೆಗಡಿ, ತುರಿಕೆ, ಕಣ್ಣು ಕೆಂಪಗಾಗುವುದು, ಕಿರಿಕಿರಿಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ ಎಂದು ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ಕಮಿಟಿಯ ಡಾ. ವಿಪಿನ್ ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ