Kornersite

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿಸಿದರು. ಈ ಮೂಲಕ ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಖುದ್ದು ಕಾಗೇರಿ, ಅಮಿತ್ ಶಾ ಮೂಲಕ ಜಗದೀಶ್ ಶೆಟ್ಟರ್ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ನಡೆಸಿದರು. ಆದರೂ ಇದಕ್ಕೆ ಬಗ್ಗದ ಜಗದೀಶ ಶೆಟ್ಟರ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ಗೆ ನೀಡಿ ಕಚೇರಿಯಿಂದ ಹೊರ ಬಂದರು.


ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ ಶೆಟ್ಟರ್, ಅಧಿಕಾರದ ಆಸೆಗಾಗಿ ನಾನು ರಾಜಕಾರಣಕ್ಕೆ ಬಂದವನಲ್ಲ. ಜನರ ಅಪೇಕ್ಷೆ ಮೇರೆಗೆ ಶಾಸಕನಾಗಿ ಕೆಲಸ ಮಾಡುವ ಕನಸು ಇಟ್ಟುಕೊಂಡವನು. ನಾನು ರೌಡಿಶೀಟರ್ ಅಲ್ಲ, ನನ್ನದು ಯಾವುದೇ ಸಿಡಿ ಇಲ್ಲ. ಬಿಎಸ್ವೈ, ಅನಂತಕುಮಾರ್ ನೇತೃತ್ವದ ಸಂದರ್ಭದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಅಧಿಕಾರದಲ್ಲಿ ಇಲ್ಲದ ಸಂದರ್ಭದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ. ಆದರೆ ಈಗ ನಮ್ಮ ಪಕ್ಷದಿಂದ ನಮ್ಮನ್ನೇ ಹೊರ ಹಾಕುತ್ತಿದ್ದಾರೆ ಎಂದು ಬಿಜೆಪಿಯ ಕೆಲವು ನಾಯಕರ ಹೆಸರನ್ನು ಹೇಳದೆ ಆಕ್ರೋಶ ಹೊರ ಹಾಕಿದರು.


ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ನಾನು ಇಲ್ಲಿಯವರೆಗೂ ಯಾವುದೇ ನಾಯಕರ ಜತೆ ಚರ್ಚೆ ಮಾಡಿಲ್ಲ. ಈಗ ಹುಬ್ಬಳ್ಳಿಗೆ ಹೋಗುತ್ತಿದ್ದು, ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಅವರನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸಿದ್ದು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ದೂರವಾಣಿ ಕರೆ ಮಾಡಿ ಕಾಂಗ್ರೆಸ್ಗೆ ಆಹ್ವಾನ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಈ ಬಗ್ಗೆ ಈಗಲೇ ಶೆಟ್ಟರ್ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಬದಲಾಗಿ ಮತ್ತೊಂದು ಸುತ್ತಿನ ಬೆಂಗಲಿಗರ ಸಭೆಯಲ್ಲಿ ಚರ್ಚಿಸಿ ಮುಂದಿನ ನಡೆಯ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ