Kornersite

Bengaluru Just In Karnataka State

School Fees: ಖಾಸಗಿ ಶಾಲೆಗಳಿಗೆ ಮೂಗುದಾನ ಹಾಕಿದ ಸರ್ಕಾರ!

Bangalore : ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.


ಇದರನ್ವಯ ಖಾಸಗಿ ಶಾಲೆಗಳ ಶುಲ್ಕದ ವಿವರಗಳನ್ನು ಕಡ್ಡಾಯಗೊಳಿಸಿದೆ. ಹೊಸ ಶೈಕ್ಷಣಿಕ ವರ್ಷ ಸಮೀಪಿಸುತ್ತಿದ್ದಂತೆಯೇ ಹೊಸದಾಗಿ ಶಾಲೆಗೆ ಸೇರ್ಪಡೆಯಾಗುವವರು ಹಾಗೂ ಮತ್ತೊಂದು ಶಾಲೆಗೆ ಪ್ರವೇಶ ಪಡೆಯುವರ ಪ್ರಕ್ರಿಯೆಯೂ ಆರಂಭವಾಗಿದೆ. ಖಾಸಗಿ ಶಾಲೆಗಳು ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ ಗೊಳಿಸಿ ಸುತ್ತೋಲೆ ಹೊರಡಿಸಿದೆ.


ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ವಿವರಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಿದೆ. ಅಲ್ಲದೆ ಏಪ್ರಿಲ್ ನಿಂದ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ತಿಳಿಸಲಾಗಿದ್ದು, ಜೊತೆಗೆ ಮಗು ಹಿಂದೆ ಓದುತ್ತಿದ್ದ ಶಾಲೆ ತೊರೆದು ಬೇರೆ ಶಾಲೆಗೆ ಪ್ರವೇಶ ಪಡೆದ ಸಂದರ್ಭದಲ್ಲಿ ತಕ್ಷಣವೇ ವರ್ಗಾವಣೆ ಪತ್ರ ನೀಡಬೇಕು ಎಂದು ತಿಳಿಸಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ