Kornersite

Just In Karnataka Politics State

Karnataka Assembly Election: 10 ಸಾವಿರ ಮನೆಗಳಿಂದ ಭಿಕ್ಷೆ ಬೇಡಿ, ನಾಮಪತ್ರ ಸಲ್ಲಿಕೆ!

Yadagiri : ಅಭ್ಯರ್ಥಿಯೊಬ್ಬರು ನೀಡಿರುವ ಹಣವನ್ನು ಎಣಿಸಲು ಅಧಿಕಾರಿಗಳೇ ಇಲ್ಲಿ ಸುಸ್ತಾಗಿದ್ದಾರೆ. ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10 ಸಾವಿರ ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ.


ಈ ಪಕ್ಷೇತರ ಅಭ್ಯರ್ಥಿ ಹೆಸರು ಯಂಕಪ್ಪ. ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತಿ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು ವರ್ಷ ಮನೆಬಿಟ್ಟು ಠೇವಣಿ ಸಂಗ್ರಹಿಸಿರುವ ಇವರು, ಯಾವುದೇ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕಿದ್ದರೂ ಅಲ್ಲಿನ ದೇವಸ್ಥಾನಗಳಲ್ಲಿಯೇ ಇರುತ್ತಿದ್ದರು. ಅದೇ ಊರಿನ ಮನೆಗಳಲ್ಲಿ ಭಿಕ್ಷೆ ಬೇಡಿ ಊಟವನ್ನೂ ಮಾಡುತ್ತಿದ್ದರು ಎನ್ನಲಾಗಿದೆ.


ಯಂಕಪ್ಪ ತಮ್ಮ ಕೊರಳಿಗೆ ಹಾಕಿಕೊಂಡಿದ್ದ ಪೋಸ್ಟರ್‌ನಲ್ಲಿ (Poster) 12ನೇ ಶತಮಾನದ ಸಮಾಜ ಸುಧಾರಕರಾದ ಜ್ಞಾನಜ್ಯೋತಿ ಬಸವೇಶ್ವರ, ಸಂತ ಕವಿ ಕನಕದಾಸ, ಸ್ವಾಮಿ ವಿವೇಕಾನಂದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರಗಳು ಮತ್ತು ಸಂವಿಧಾನದ ಪೀಠಿಕೆ ಹಾಕಿಕೊಂಡು ಊರೂರು ಸುತ್ತಾಡಿ ಹಣ ಸಂಗ್ರಹಿಸಿದ್ದಾರೆ. ಕನ್ನಡದಲ್ಲಿ ಕೇವಲ ಒಂದು ರೂಪಾಯಿ ಅಲ್ಲ, ನಿಮ್ಮ ಒಂದು ಮತ, ನೀವು ಒಂದು ದಿನ ನನಗೆ ಮತ (Vote) ನೀಡಿ, ನಾನು ನಿಮಗೆ ಬಡತನದಿಂದ ಮುಕ್ತಿ ನೀಡುತ್ತೇನೆ ಎಂಬ ಘೋಷವಾಕ್ಯದೊಂದಿಗೆ ಚುನಾವಣಾ ಅಖಾಡಕ್ಕೆ ಯಂಕಪ್ಪ ಧುಮುಕಿದ್ದಾರೆ.


ಯಂಕಪ್ಪ, ಕಲಬುರಗಿ (Kalaburagi) ಜಿಲ್ಲೆಯ ಕಲಬುರಗಿ ವಿಶ್ವವಿದ್ಯಾಲಯದಿಂದ (Gulbarga University) ಕಲಾ ಪದವೀಧರರಾಗಿದ್ದಾರೆ. 60 ಸಾವಿರ ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವರ ತಂದೆ ದೇವಿಂದ್ರಪ್ಪ ಒಂದು ಎಕರೆ 16 ಗುಂಟೆ ಜಮೀನು ಹೊಂದಿದ್ದಾರೆ ಎಂದು ಆಸ್ತಿಯ ವಿವರ ಘೋಷಿಸಿಕೊಂಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು