Haveri : ಬೊಮ್ಮಾಯಿ ಮಾಮಾನನ್ನು ನೀವೆಲ್ಲರೂ ಸೇರಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದ್ದಾರೆ.
ಶಿಗ್ಗಾವಿಯಲ್ಲಿ ನಡೆದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್ ಶೋದಲ್ಲಿ ಭಾಗವಹಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವೆಲ್ಲರೂ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ನಾನು ಮೊದಲ ಬಾರಿಗೆ ಈ ಪಟ್ಟಣಕ್ಕೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದರು.
ನಾನು ಸುಮ್ಮನೆ ಪ್ರಚಾರಕ್ಕೆ ಇಳಿಯುವುದಿಲ್ಲ. ಗೆದ್ದೆ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆಯತನ ಎನ್ನುವಂತೆ ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ನೀವು ಅದಕ್ಕೆ ಅವಕಾಶ ನೀಡಿ ಎಂದು ಮನವಿ ಮಾಡಿದರು.