Kornersite

Just In Sports

IPL 2023: ಸಾಧಾರಣ ಗುರಿ ನೀಡಿದರೂ ಗೆದ್ದ ಲಕ್ನೋ; ತವರಿನಲ್ಲಿ ಮುಖಭಂಗ ಅನುಭವಿಸಿದ ರಾಜಸ್ಥಾನ್!

Jaipur : ಸಾಧಾರಣ ಗುರಿ ನೀಡಿದರೂ ಲಕ್ನೋ ಗೆದ್ದು ಬೀಗಿದೆ. ಹೀಗಾಗಿ ತವರಿನಲ್ಲಿ ನಡೆದ ಪಂದ್ಯದಲ್ಲಿ ಸೋತು ರಾಜಸ್ಥಾನ್ ತಂಡ ಮುಖಭಂಗ ಅನುಭವಿಸಿದೆ. ಕೇಲ್‌ ಮೇಯರ್ಸ್‌ (Kyle Mayers) ಜವಾಬ್ದಾರಿಯುತ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 10 ರನ್‌ಗಳ ಜಯ ಸಾಧಿಸಿದೆ.

ಟಾಸ್‌ ಸೋತು ಮೊದಲು ಕ್ರೀಸ್‌ ಗಿಳಿದ ಲಕ್ನೋ ಸೂಪರ್‌ ಜೈಂಟ್ಸ್‌ 20 ಓವರ್‌ ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 154 ರನ್‌ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. 155 ರನ್‌ ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ್‌ ರಾಯಲ್ಸ್‌ ನಿಗದಿತ 20 ಓವರ್‌ಗಳಲ್ಲಿ 144 ರನ್‌ ಮಾತ್ರ ಗಳಿಸಿ, ಸೋಲು ಅನುಭವಿಸಿತು.


ಗುರಿ ಬೆನ್ನಟ್ಟಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡ ನಿಧಾನಗತಿಯ ಬ್ಯಾಟಿಂಗ್‌ ಹೊರತಾಗಿಯೂ ಉತ್ತಮ ಆರಂಭ ಪಡೆದುಕೊಂಡಿತ್ತು. ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ (Jos Buttler) ಜೋಡಿ ಮೊದಲ ವಿಕೆಟ್‌ ಪತನಕ್ಕೆ 11.3 ಓವರ್‌ಗಳಲ್ಲಿ 87 ರನ್‌ ಗಳಿಸಿತ್ತು. ಈ ಸಂದರ್ಭದಲ್ಲಿ 35 ಎಸೆತಗಳಲ್ಲಿ 44 ರನ್‌ ಗಳಿಸಿ ಜೈಸ್ವಾಲ್‌ ಔಟಾಗುತ್ತಿದ್ದಂತೆ, ಜೋಸ್‌ ಬಟ್ಲರ್‌ ಸಹ 40 ರನ್‌ ವಿಕೆಟ್ ಒಪ್ಪಿಸಿದರು.
ನಾಯಕ ಸಂಜು ಸ್ಯಾಮ್ಸನ್‌ (Sanju Samson) ಬೇಡದ ರನ್‌ ಕದಿಯಲು ಹೋಗಿ ರನೌಟ್‌ ಆದರು. ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಶಿಮ್ರಾನ್‌ ಹೆಟ್ಮೇಯರ್‌ ಕೇವಲ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಇದು ತಂಡಕ್ಕೆ ಹೆಚ್ಚಿನ ಆಘಾತ ನೀಡಿತು. ಕೊನೆಯ ಓವರ್‌ವರೆಗೂ ಹೋರಾಡಿ 21 ಎಸೆತಗಳಲ್ಲಿ 26 ರನ್‌ ಗಳಿಸಿದ್ದ ದೇವದತ್‌ ಪಡಿಕಲ್‌ ಕ್ಯಾಚ್‌ ನೀಡಿ ನಿರಾಸೆ ಮೂಡಿಸಿದರು. ಇದರಿಂದ ರಾಜಸ್ಥಾನ್‌ ತಂಡ ಸಂಪೂರ್ಣವಾಗಿ ಗೆಲುವಿನ ಭರವಸೆ ಕೈಚೆಲ್ಲಿತು. ರಿಯಾನ್‌ ಪರಾಗ್‌ 15 ರನ್‌, ಅಶ್ವಿನ್‌ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.


ಲಕ್ನೋ ಸೂಪರ್‌ ಜೈಂಟ್ಸ್‌ ಪರ ಅವೇಶ್‌ ಖಾನ್‌ ಪ್ರಮುಖ 3 ವಿಕೆಟ್‌ಗಳನ್ನು ಕಿತ್ತರೆ, ಮಾರ್ಕಸ್‌ ಸ್ಟೋಯ್ನಿಸ್‌ 2 ವಿಕೆಟ್‌ ಪಡೆದು ಮಿಂಚಿದರು.
ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದರೂ ಲಕ್ನೋ ಸೂಪರ್ ಜೈಂಟ್ಸ್ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಬೃಹತ್‌ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ಮೊದಲ ವಿಕೆಟ್‌ ಪತನಕ್ಕೆ 82 ರನ್‌ಗಳ ಆರಂಭಿಕ ಜೊತೆಯಾಟವನ್ನು ಪಡೆದುಕೊಂಡಿತ್ತಾದರೂ ರನ್ ವೇಗ ನಿಧಾನವಾಗಿತ್ತು. ನಾಯಕ ಕೆ.ಎಲ್.ರಾಹುಲ್ ಪವರ್‌ ಪ್ಲೇನಲ್ಲೂ ಅಬ್ಬರಿಸುವಲ್ಲಿ ವಿಫಲವಾದರು. ಕೇಲ್‌ ಮೇಯರ್ಸ್‌ ಹಾಗೂ ಕೆ.ಎಲ್‌ ರಾಹುಲಗ್‌ 10.4 ಓವರ್‌ಗಳಲ್ಲಿ 82 ರನ್‌ ಗಳಿಸಿತ್ತು.121.87 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಕೆ.ಎಲ್‌ ರಾಹುಲ್‌ 32 ಎಸೆತಗಳಲ್ಲಿ ಕೇವಲ 39 ರನ್‌ ಗಳಿಸಿದರು. ನಿಧಾನಗತಿಯ ಬ್ಯಾಟಿಂಗ್‌ ಪ್ರದರ್ಶಿಸಿದ ಕೇಲ್‌ ಮೇಯರ್ಸ್‌ ಕೂಡ 42 ಎಸೆತಗಳಲ್ಲಿ 51 ರನ್‌ ಗಳಿಸಿ ಔಟ್ ಆದರು.


ಉಳಿದಂತೆ ಆಯುಷ್ ಬದೋನಿ ಹಾಗೂ ದೀಪಕ್ ಹೂಡಾ ಕಳಪೆ ಪ್ರದರ್ಶನ ನೀಡಿದರು. ಇನ್ನು ಮಾರ್ಕಸ್ ಸ್ಟೋಯ್ನಿಸ್ 16 ಎಸೆತದಲ್ಲಿ 21 ರನ್ ಬಾರಿಸಿದರೆ ನಿಕೋಲಸ್ ಪೂರನ್ 20 ಎಸೆತಗಳಲ್ಲಿ 28 ರನ್ ಬಾರಿಸಿದರು. ರಾಜಸ್ಥಾನ್‌ ಪರ ರವಿಚಂದ್ರನ್‌ ಅಶ್ವಿನ್‌ 2 ವಿಕೆಟ್‌ ಕಿತ್ತರೆ, ಟ್ರೆಂಟ್‌ ಬೋಲ್ಟ್‌, ಸಂದೀಪ್‌ ಶರ್ಮಾ, ಜೇಸನ್‌ ಹೋಲ್ಡರ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

You may also like

Sports

ಡಿವೈನ್ ಭರ್ಜರಿ ಆಟಕ್ಕೆ ಮಂಕಾದ ಜೈಂಟ್ಸ್!

ಮುಂಬಯಿ : ಆಲ್‌ ರೌಂಡರ್‌ ಸೋಫಿ ಡಿವೈನ್‌ ಭರ್ಜರಿ ಆಟಕ್ಕೆ ಗುಜರಾತ್ ಜೈಂಟ್ಸ್ ತಂಡವು ಸೋಲು ಒಪ್ಪಿಕೊಳ್ಳುವಂತಾಯಿತು.ಗುಜರಾತ್‌ ಜೈಂಟ್ಸ್‌ ವಿರುದ್ಧ ಆರ್ ಸಿಬಿ 8 ವಿಕೆಟ್‌ ಗಳ
Sports

ಮಾಜಿ ಕ್ರಿಕೆಟಿಗ ಸಲೀಂ ದುರಾನಿ ಇನ್ನಿಲ್ಲ!

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ಆಲ್ ರೌಂಡರ್ ಆಟಗಾರ ಸಲೀಂ ದುರಾನಿ ವಯೋಸಹಜ ಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾರೆ.1960ರ ದಶಕದಲ್ಲಿ ಭಾರತದ ಆಲ್ ರೌಂಡರ್