Bangalore : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ತುಮಕೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯೊಂದಿಗೆ ಗಂಟೆಗೆ 50 ರಿಂದ 70 ಕಿಲೋಮೀಟರ್ ವೇಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.