ಸನಾ : ರಂಜಾನ್ ಅಂಗವಾಗಿ ಬಡವರಿಗೆ ನೆರವು ನೀಡುವ ಕಾರ್ಯಕ್ರಮದಲ್ಲಿ ಕಾಲ್ತುಳಿತ ಉಂಟಾಗಿ (Stampede) 85 ಜನ ಸಾವನ್ನಪ್ಪಿದ ಘಟನೆ ಯೆಮೆನ್‍ನಲ್ಲಿ (Yemen) ನಡೆದಿದೆ.

ಯೆಮೆನ್ ರಾಜಧಾನಿ ಸನಾದ ಬಾಬ್ ಅಲ್-ಯೆಮೆನ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ರಂಜಾನ್ (RamaZan) ಹಿನ್ನೆಲೆಯಲ್ಲಿ ಬಡಜನರಿಗೆ ನೆರವು ನೀಡಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಒಬ್ಬರಿಗೆ 5,000 ಯೆಮೆನಿ ರಿತಾಲ್ಸ್ (1,600 ರೂ), ಬಟ್ಟೆ, ಆಹಾರ ಸೇರಿದಂತೆ ಹಲವು ವಸ್ತುಗಳ ನೆರವು ನೀಡಲಾಗುತ್ತತ್ತು.

ನೆರವು ಪಡೆಯಲು ಹಲವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತದದಲ್ಲಿ ಕನಿಷ್ಠ 85 ಜನ ಸಾವನ್ನಪ್ಪಿದ್ದಾರೆ ಹಾಗೂ 322 ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳೀಯ ಆಡಳಿತದ ಸಹಾಯವಿಲ್ಲದೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.