Ramanagar : ಡಿಕೆ ಶಿವಕುಮಾರ್ (DK Shivakumar) ಅವರ ನಾಮಪತ್ರ ಸ್ವೀಕೃತವಾಗಿದ್ದು, ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಡಿ.ಕೆ. ಶಿವಕುಮಾರ್ ಕಾಂಗ್ರೆಸ್‌ನಿಂದ (Congress) ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ, ಆದಾಯ ತೆರಿಗೆ ಅಧಿಕಾರಿಗಳು ನೀಡಿದ ನೊಟೀಸ್ ಹಿನ್ನೆಲೆಯಲ್ಲಿ ಅವರ ನಾಮಪತ್ರ ತಿರಸ್ಕೃತವಾಗುತ್ತದೆ ಎಂಬ ಆತಂಕ ಶುರುವಾಗಿತ್ತು. ಹೀಗಾಗಿ ಅವರ ಸಹೋದ ಡಿಕೆ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಸದ್ಯ ಡಿಕೆಶಿ ನಾಮಪತ್ರ ಸ್ವೀಕೃತವಾಗಿದ್ದು, ದೊಡ್ಡ ತಲೆನೋವು ಕಳೆದಂತಾಗಿದೆ.
ಕೆಪಿಸಿಸಿ ಅಧ್ಯಕ್ಷರ ನಾಮಪತ್ರವನ್ನು ಚುನಾವಣಾಧಿಕಾರಿ ಸಂತೋಷ್ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಅಫಿಡವಿಟ್ ಸೇರಿದಂತೆ ಇನ್ನಿತರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಡಿಕೆಶಿ 4 ಸೆಟ್ ನಾಮಪತ್ರಗಳನ್ನು ಸಲ್ಲಿಸಿದ್ದು, ಎಲ್ಲ ನಾಮಪತ್ರಗಳನ್ನೂ ಸ್ವೀಕೃತಗೊಳಿಸಲಾಗಿದೆ.
ಡಿಕೆಶಿಯ ನಾಮಪತ್ರ ಸ್ವೀಕೃತಗೊಂಡ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.