Kornersite

Bengaluru Just In Karnataka Politics State

Karnataka Assembly Election: ಬರೋಬ್ಬರಿ 6.9 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಹುಬ್ಬಳ್ಳಿಯಿಂದ ಹಾವೇರಿ, ದಾವಣಗೆರೆ ಅಂಗಡಿಗಳಿಗೆ ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಸುಮಾರು 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ಸಾಗಿಸಲಾಗುತ್ತಿತ್ತು. ಇದರ ಒಟ್ಟು ಮೌಲ್ಯ 6.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.


ವಾಹನ ಪರಿಶೀಲನೆ ಪತ್ತೆಯಾದ ಆಭರಣಗಳು ಮತ್ತು ಸಾಗಾಟ ಮಾಡಲು ಬಳಕೆ ಮಾಡಿದ್ದ ವಾಹನವನ್ನು ಚುನಾವಣಾಧಿಕಾರಿಗಳು ಮತ್ತು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗಾಟಗಾರರಲ್ಲಿ ಆಭರಣಗಳ ಖರೀದಿಸಿದ ಬಿಲ್ ಗಳು ಕೂಡ ಇವೆ. ಅದರೆ ಚುನಾವಣೆ ಅಧಿಕಾರಿಯಿಂದ ಯಾವುದೇ ಅನುಮತಿಯನ್ನ ಪಡೆದಿಲ್ಲ. ಮಾತ್ರವಲ್ಲದೆ, ನಿಖರವಾಗಿ ಚಿನ್ನಾಭರಣಗಳನ್ನು ಯಾವ ಊರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂಬ ದಾಖಲೆಗಳು ಇಲ್ಲ. ಈಗ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಮಿತಿಗೆ ಒಪ್ಪಿಸಲಾಗಿದೆ

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು