Kornersite

International Just In

ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡ ಸ್ಪೇಸ್‌ಎಕ್ಸ್ ರಾಕೆಟ್!

ಉದ್ಯಮಿ ಎಲಾನ್ ಮಸ್ಕ್ ಒಡೆತನದಲ್ಲಿ ಸ್ಪೇಸ್ ಎಕ್ಸ್ ನಿರ್ಮಿಸಿದ್ದ ಜಗತ್ತಿನ ಅತಿದೊಡ್ಡ ರಾಕೆಟ್ ಸ್ಪೇಸ್‌ ಎಕ್ಸ್‌ ನ ರಾಕೆಟ್ ಪ್ರಾಯೋಗಿಕ ಉಡಾವಣೆಯಲ್ಲಿಯೇ ಸ್ಪೋಟಗೊಂಡಿದೆ.

ಟೆಕ್ಸಾಸ್‌ ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್‌ ಎಕ್ಸ್ ಕಂಪೆನಿಯ ಸ್ಟಾರ್‌ ಬೆಸ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಈ ದೈತ್ಯಾಕಾರದ ರಾಕೆಟ್‌ ಉಡಾವಣೆ ಮಾಡಲಾಗಿತ್ತು. ಆದರೆ ಉಡಾವಣೆಯಾದ ಕೆಲವೇ ನಿಮಿಷಗಳಲ್ಲಿ ಸ್ಫೋಟಗೊಂಡಿದ್ದು, ಗಲ್ಫ್ ಆಫ್ ಮೆಕ್ಸಿಕೊಗೆ ಅಪ್ಪಳಿಸಿದೆ.

ಗಗನಯಾತ್ರಿಗಳನ್ನು ಚಂದ್ರ, ಮಂಗಳ ಹಾಗೂ ಅದರಾಚೆಗಿನ ಗ್ರಹಗಳಿಗೆ ಕಳುಹಿಸುವ ಉದ್ದೇಶದಿಂದ ಸ್ಟಾರ್‌ ಶಿಪ್‌ ರಾಕೆಟ್‌ ಅನ್ನು ಅಭಿವೃದ್ಧಿಪಡಿಸಲಾಗಿತ್ತು. ಆದರೆ, ಉಡಾವಣೆಯಾದ ಮೂರು ನಿಮಿಷಗಳಲ್ಲಿ ಮೊದಲ ಹಂತದಿಂದ ಸ್ಟಾರ್‌ ಶಿಪ್‌ ಕ್ಯಾಪ್ಸುಲ್‌ ಬೇರ್ಪಡಬೇಕಿತ್ತು. ಬೇರ್ಪಡಲು ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಕೆಟ್‌ ಮಧ್ಯದಲ್ಲಿಯೇ ಸ್ಟೋಟಗೊಂಡಿದೆ. ಸ್ಟೋಟಗೊಂಡ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

You may also like

International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು
International Tech

ಹಾರಿ ಹೋದ ನೀಲಿ ಹಕ್ಕಿ- ಜಾಗ ತುಂಬಿದ ನಾಯಿ

Washington : ಟ್ವಿಟ್ಟರ್ ಸಿಇಓ ಎಲಾನಾ ಮಸ್ಕ್ ಟ್ವಿಟ್ಟರ್ ಖರೀದಿಸಿದಾಗಿನಿಂದ ಹೆಚ್ಚು ಸುದ್ದಿಯಾಗುತ್ತಲೇ ಇದ್ದಾರೆ. ಸದ್ಯ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರ ಹಾಕಿದ್ದು, ದೊಡ್ಡ