ಯುವತಿ ರೀಲ್ಸ್ ಮಾಡುತ್ತಾಳೆ ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ (Young Woman) ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ್ದಾನೆ.
ಯಾದಗಿರಿ (Yadagiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಅಂತಿಮಾ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ (Uttar Pradesh) ಮೂಲದ ನಿವಾಸಿ ಎನ್ನಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಸಹೋದರನೊಂದಿಗೆ ವಾಸಿಸುತ್ತಿದ್ದ ಯುವತಿಯನ್ನು ಈತ ಪ್ರೀತಿಸುತ್ತಿದ್ದ. ಆನಂತರ ಯಾದಗಿರಿ (Yadagiri)ಯ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿ, ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ.
ಮುಂಬೈನಲ್ಲಿ ಸಹೋದರನ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶದ ಮೂಲದ ಅಂತಿಮಾ ವರ್ಮಾಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಅಭ್ಯಾಸವಿತ್ತು. ಆದರೆ, ಮಾರುತಿಗೆ ಇದು ಇಷ್ಟವಿರಲಿಲ್ಲ. ಹೀಗಾಗಿ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ಹೀಗೆ ಮಾಡಿದರೆ, ಅವಳು ಕೈ ಕೊಡುತ್ತಾಳೆಂದು ಭಾವಿಸಿ, ತನ್ನ ಊರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪೊಲೀಸರ ದಾರಿ ತಪ್ಪಿಸುವ ನಿಟ್ಟಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಂತೆ ವಿಡಿಯೋ ಮಾಡಿ, ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆತನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.