ಬಿಸಿಸಿಐ ಶುಕ್ರವಾರ ಟಿ20 ಲೀಗ್ ನ ಕ್ವಾಲಿಫೈಯರ್ ಪಂದ್ಯಗಳ ವೇಳಾ ಪಟ್ಟಿ ಪ್ರಕಟಿಸಿದ್ದು, ಚೆನ್ನೈ ಹಾಗೂ ಅಹಮದಾಬಾದ್ ನಲ್ಲಿ ನಡೆಯಲಿವೆ.
ಮೇ 23ರಂದು ಮೊದಲ ಕ್ವಾಲಿಫೈಯರ್, ಮೇ 24ರಂದು ಎಲಿಮಿನೇಟರ್ ಪಂದ್ಯಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್, ಮೇ 28ರಂದು ಫೈನಲ್ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮೇ 21ರಂದು ಲೀಗ್ ಹಂತ ಮುಕ್ತಾಯಗೊಳ್ಳಲಿದೆ.
ಕಳೆದ ವರ್ಷವೂ 2ನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಅಹಮದಾಬಾದ್ ನಲ್ಲಿಯೇ ನಡೆದಿದ್ದವು. ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಕೋಲ್ಕತಾದಲ್ಲಿ ಆಯೋಜಿಸಲಾಗಿತ್ತು. ಈ ವರ್ಷದ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ ಆಯ್ಕೆ ಮಾಡಿತ್ತು.